News Karnataka Kannada
Thursday, May 02 2024
ಕ್ಯಾಂಪಸ್

ರಜಾ ದಿನಗಳಂದು ಕಾರ್ಯ ನಿರ್ವಹಿಸಲಿರುವ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಯೋಚಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ.
Photo Credit : News Kannada

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಯೋಚಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ.

ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ಮಾರ್ಚ್ 31ರ ವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 5: 00ರ ವರೆಗೆ ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರಿನ ಕಚೇರಿಯನ್ನು ತೆರೆಯುವ ಮೂಲಕ 2023-24ನೇ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.

ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.

ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು