ಕುಂದಾಪುರ: ಶಿಕ್ಷಣ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಹಳಷ್ಟು ಬದಲಾವಣೆಗಳಾಗುತ್ತಿದೆ,ಬದಲಾವಣೆಗೆ ತಕ್ಕಂತೆ ಮಕ್ಕಳಿಗೆ ಅವಶ್ಯಕವಿರುವ ಶಿಕ್ಷಣವನ್ನು ಒದಗಿಸುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯ ಎಂದು ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಹೇಳಿದರು.
ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳ ಆ್ಯಕ್ಟಿವಿಟಿ ಲ್ಯಾಬ್ನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ,ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್, ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಖಜಾಂಚಿ ಎನ್.ಅಶ್ವಿನ್ ನಾಯಕ್, ಸದಸ್ಯ ಎಂ.ನಾಗೇಂದ್ರ ಪೈ ಉಪಸ್ಥಿತರಿದ್ದರು. ಶಿಕ್ಷಕಿ ಲಲಿತಾ ಜಿ.ಕಾಮತ್ ಕ್ರೀಡೆ ಮತ್ತು ಶಾಲಾ ರೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.
ಶಿಕ್ಷಕಿ ಮಾಲತಿ ಸ್ವಾಗತಿಸಿದರು. ಸಂಚಾಲಕ ಎನ್.ಸದಾಶಿವ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ರೂಪಾ ನಿರ್ವಹಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ ವಂದಿಸಿದರು.