ವಿಚಾರ ಕ್ರಾಂತಿಗೆ ಕುವೆಂಪು ಸಾಹಿತ್ಯ ಪೂರಕ- ಡಾ. ಎಚ್. ಎಸ್. ಸತ್ಯನಾರಾಯಣ

ಉಜಿರೆ, ಜು.6: ಪ್ರಸ್ತುತ ದಿನಮಾನಗಳಲ್ಲಿ ಕುವೆಂಪು ಅವರ ವಿಚಾರದೃಷ್ಠಿ, ವಿಶ್ವಮಾನವ ಸಂದೇಶ, ಸಾಹಿತ್ಯಗಳಲ್ಲಿನ ವೈಚಾರಿಕತೆ ಮತ್ತು ಸೂಕ್ಷ್ಮತೆಗಳನ್ನು ಹೊಸ ತಲೆಮಾರಿನ ಯುವ ಸಮೂಹ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಸಾಹಿತಿ ಡಾ. ಎಚ್. ಎಸ್. ಸತ್ಯನಾರಾಯಣ ಅಭಿಪ್ರಾಯಪಟ್ಟರು.

ಎಸ್‌ಡಿಎಂ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ನಡೆದ ಕನ್ನಡ ವಿಭಾಗದ ಕನ್ನಡ ಸಂಘ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ಕುರಿತು ಆಯೋಜಿತವಾಗಿದ್ದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು.

ಕುವೆಂಪು ಅವರ ಸಾಹಿತ್ಯಗಳಲ್ಲಿನ  ಸೂಕ್ಷ್ಮತೆಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಮೌಢ್ಯ, ಜಾತಿ, ಮತ ಸಂಕೋಲೆಗಳ ಅಡ್ಡಿಗಳಿರಬಾರದು ಎಂದು ಅಲೋಚಿಸಿದ್ದರು. ‘ಗುಡಿ, ಚರ್ಚು, ಮಸೀದಿಗಳಿಂದ ಹೊರಬನ್ನಿ’ ಎಂಬ ವಾಕ್ಯದಿಂದ ಕುವೆಂಪು ಅವರನ್ನು ನಾಸ್ತಿಕ ಎಂಬ ದೃಷ್ಠಿಯಿಂದ ಬಿಂಬಿಸಲಾಗುತ್ತಿದೆ. ಆದರೆ ಅದರ ಸೂಕ್ಷ್ಮತೆ ಏನು ಎಂಬುದರ ಕುರಿತು ತಿಳಿದುಕೊಳ್ಳುವುದರಲ್ಲಿ ವಿಫಲರಾಗಿದ್ದಾರೆ ಎಂದರು.

ಹೊಸ ತಲೆಮಾರಿನ ಯುವ ಸಮೂಹಕ್ಕೆ ಕುವೆಂಪು ವೈಚಾರಿಕ ಸಾಹಿತ್ಯ ಓದಿನ ಅಗತ್ಯವಿದೆ. ಶ್ರೇಷ್ಠ ಸಂದೇಶ, ಸಾಹಿತ್ಯ ಓದಿನ ಮೂಲಕ ವೈಚಾರಿಕತೆಯನ್ನು ಜಾಗೃತಿಗೊಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ, ಸತೀಶ್ಚಂದ್ರ ಎಸ್ ಮಾತನಾಡಿದರು. ಇಂದಿನ ಶೈಕ್ಷಣಿಕ ಯುಗದಲ್ಲಿ ಪಠ್ಯ ಹಾಗೂ ಪಠ್ಯೇತರದ ಜೊತೆ ಕುವೆಂಪು ಅವರ ವ್ಯಕ್ತಿತ್ವ ಪರಿಚಯವಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ. ಎ ಮಾತನಾಡಿದರು. ವಿಶಾಲ ಸಾಹಿತ್ಯ ಓದಿನಿಂದ ಹೊಸ ವಿಚಾರಗಳು ಅನುಷ್ಠಾನಗೊಳ್ಳುತ್ತವೆ. ಸಾಮಾನ್ಯನೊಬ್ಬ ಅಸಾಮಾನ್ಯನಾಗಿ ರೂಪಗೊಳ್ಳುತ್ತಾನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ ಪ್ರಕಾಶ್ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ. ಎನ್, ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ್ ಹಳೆಮನೆ ಉಪಸ್ಥಿತರಿದ್ದರು. ಮಹೇಶ್ ನಿರೂಪಿಸಿದರು. ಪ್ರಣಮ್ಯ ತಂಡದವರು ಪ್ರಾರ್ಥಿಸಿ, ಜಯಶ್ರೀ ವಂದಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago