ಮಂಗಳೂರು

ಮಂಗಳೂರು ವಿವಿ: ಸೆ. 29 ರಂದು 43ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 43 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆಪ್ಟೆಂಬರ್‌ 29 (ಗುರುವಾರ) ರಂದು ಅಪರಾಹ್ನ 2.30 ಕ್ಕೆ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕದ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಿ ಸುನಿಲ್‌ ಕುಮಾರ್‌, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕರಾದ ಯು ಟಿ ಖಾದರ್‌, ವೇದವ್ಯಾಸ ಕಾಮತ್‌, ವಿಧಾನ ಪರಿಷತ್‌ ಸದಸ್ಯ ಎಸ್‌ ಎಲ್‌ ಭೋಜೇಗೌಡ ಗೌರವಾನ್ವಿತ ಅತಿಥಿಗಳಾಗಿರಲಿದ್ದಾರೆ.

ಅಂತಾರಾಷ್ಟ್ರೀಯ ತರಬೇತುದಾರ ಡಾ. ಭರತ್‌ ಚಂದ್ರ ಸಂಸ್ಥಾಪನಾ ದಿನಾಚರಣೆಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಾಧಕರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನೃತ್ಯ ನಿಕೇತನ, ಕೊಡವೂರು, ಉಡುಪಿ ಇಲ್ಲಿನ ಕಲಾವಿದರಿಂದ ʼನೃತ್ಯ ಸಿಂಚನʼ ಕಾರ್ಯಕ್ರಮ ನಡೆಯಲಿದೆ ಎಂದು ಕುಲಸಚಿವರು ಹಾಗೂ ಕಾರ್ಯಕ್ರಮ ಸಂಯೋಜಕರ ಪ್ರಕಟಣೆ ತಿಳಿಸಿದೆ.

Sneha Gowda

Recent Posts

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

4 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

23 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

39 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago