ಕ್ಯಾಂಪಸ್

ಮಂಗಳೂರು ವಿವಿ: ಅಕ್ಟೋಬರ್ 10 ರಿಂದ ರಾಷ್ಟ್ರಮಟ್ಟದ ಸಿನರ್ಜಿಸ್ಟಿಕ್ ತರಬೇತಿ ಕಾರ್ಯಕ್ರಮ

ಮಂಗಳೂರು ವಿವಿ: ಪರಿಸರ ವಿಕಿರಣಶೀಲತೆಯ ಮುಂದುವರಿದ ಸಂಶೋಧನಾ ಕೇಂದ್ರ (ಸಿ ಎ ಆರ್ ಇ ಆರ್ ಆರ್), ವಿಕಿರಣ ಮತ್ತು ರೇಡಿಯೋ ಐಸೋಟೋಪ್ ತಂತ್ರಜ್ಞಾನದ ಅನ್ವಯ ಕೇಂದ್ರ (ಸಿ ಎ ಆರ್ ಆರ್ ಟಿ), ವಿಶ್ವವಿದ್ಯಾನಿಲಯ ಸಂಶೋಧನೆ ಮತ್ತು ವೈಜ್ಞಾನಿಕ ಉತ್ಕೃಷ್ಟತೆಯ ಪ್ರೋತ್ಸಾಹ  ಕೇಂದ್ರಗಳು ಜಂಟಿಯಾಗಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ  ಪ್ರಾಯೋಜಕತ್ವದೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರಮಟ್ಟದ ʼವೈಜ್ಞಾನಿಕ ಮತ್ತು ತಾಂತ್ರಿಕ ಮೂಲಸೌಕರ್ಯ ಬಳಸಿಕೊಂಡು ಸಿನರ್ಜಿಸ್ಟಿಕ್ ತರಬೇತಿ ಕಾರ್ಯಕ್ರಮʼವನ್ನು  ಅಕ್ಟೋಬರ್ 10 ರಿಂದ 16 ರವರೆಗೆ ಆಯೋಜಿಸಲಾಗಿದೆ.

ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಭೌತಿಕ,ವಸ್ತುಗಳು,ರಾಸಾಯನಿಕ ಮತ್ತು ಜೈವಿಕ ವಿಜ್ಞಾನ ಸಂಶೋಧನೆಯಲ್ಲಿ ವಿಕಿರಣ ಮತ್ತು ರೇಡಿಯೊ ಐಸೋಟೋಪ್‌ಗಳ ಬಳಕೆಗಳುʼ ಎಂಬುದು ತರಬೇತಿ ಕಾರ್ಯಕ್ರಮದ ಕೇಂದ್ರ ವಿಷಯವಾಗಿರಲಿದೆ.

ಅಕ್ಟೋಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ರಾಜಶ್ರೀ ಡಾ.ವೀರೇಂದ್ರ ಹೆಗ್ಗಡೆ ಸಭಾಂಗಣದಲ್ಲಿ ಯೆನೆಪೊಯ ಯೆನೆಪೊಯ ಡೀಮ್ಡ್‌ ಟು ಬಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. (ಡಾ.) ಎಂ ವಿಜಯಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವರು.

ದೇಶದ ಪ್ರತಿಷ್ಠಿತ ಸಂಸ್ಥೆಗಳಿಂದ ಸುಮಾರು 50 ವಿಜ್ಞಾನಿಗಳನ್ನು ತರಬೇತಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುತ್ತದೆ. ಅಣುಶಕ್ತಿ ವಿಭಾಗದ ವಿಜ್ಞಾನಿಗಳು ಸೇರಿದಂತೆ ಕ್ಷೇತ್ರದ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ashika S

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

17 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

27 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago