ಕ್ಯಾಂಪಸ್

ಮಂಗಳೂರು: ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಂದಿ ಕಾರ್ಯಾಗಾರ

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಇತ್ತೀಚೆಗೆ ಕಾಲೇಜಿನ ಹಿಂದಿ ಸಂಘ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಹಿಂದಿ ಅಧ್ಯಾಪಕರ ಸಂಘಗಳ ಸಹಯೋಗದೊಂದಿಗೆ ಎನ್ಇಪಿ ಪಠ್ಯಕ್ರಮದಡಿ ನಾಲ್ಕನೇ ಸೆಮಿಸ್ಟರ್‌ನಲ್ಲಿ ಹಿಂದಿ ಕುರಿತು ಕಾರ್ಯಾಗಾರವೊಂದನ್ನು ಆಯೋಜಿಸಲಾಗಿತ್ತು.

ಕುಂದಾಪುರದ ಭಂಡಾರ್ಕರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಶೆಟ್ಟಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ದತ್ತಾತ್ರೇಯ ಭಟ್ ಅತಿಥಿ ಭಾಷಣ ಮಾಡಿದರು. ಆಳ್ವಾಸ್ ಕಾಲೇಜು ಮೂಡುಬಿದಿರೆ ಹಿಂದಿ ವಿಭಾಗದ ಮುಖ್ಯಸ್ಥ ಡಾ.ರಾಜೀವ ಸಿ ಸಂಘದ ವಾರ್ಷಿಕ ವರದಿ ಮಂಡಿಸಿದರು. ವಿವಿ ಕಾಲೇಜಿನ ಪ್ರಭಾರಿ ಪ್ರಾಂಶುಪಾಲೆ ಡಾ.ಲತಾ ಪಂಡಿತ್ ಅಧ್ಯಕ್ಷೀಯ ನುಡಿಗಳನ್ನಾಡಿದರು.

ʼಮುಹಾಸ್ʼ ಅಧ್ಯಕ್ಷೆ ಡಾ.ಕಲ್ಪನಾ ಪ್ರಭು ಸ್ವಾಗತಿಸಿದರು. ಪ್ರಫುಲ್ಲ ವಂದಿಸಿದರು. ವಿವಿ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ಸುಮಾ ಟಿ· ಆರ್ ಅವರು ಸಮಾರಂಭವನ್ನು ನಿರೂಪಿಸಿದರು. ಕಾಲೇಜಿನ ಸ್ನಾತಕೋತ್ತರ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ನಾಗರತ್ನಾ ಎನ್‌ ರಾವ್‌, ಉಪನ್ಯಾಸಕಿಯರಾದ ಡಾ. ನಾಗರತ್ನ ಶೆಟ್ಟಿ ಮತ್ತು ಡಾ. ರಶ್ಮಿ ಬಿ ವಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎನ್ಇಪಿ ಪದವಿ ಹಿಂದಿ ಪಠ್ಯಕ್ರಮದ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ವಿವಿಧ ಕಾಲೇಜುಗಳ ಶಿಕ್ಷಕರು ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಅಧ್ಯಯನ ಸಾಮಗ್ರಿಗಳನ್ನು ಪ್ರಸ್ತುತಪಡಿಸಿದರು.

ನಿವೃತ್ತ ಹಿಂದಿ ಪ್ರಾಧ್ಯಾಪಕರಾದ ಡಾ.ವಿದ್ಯಾ ಕುಮಾರ್ (ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆ), ನಂದಿನಿ (ಧವಳ ಕಾಲೇಜು ಮೂಡುಬಿದಿರೆ), ಜೂಡಿ ಪಿಂಟೋ (ಸೇಂಟ್ ಅಲೋಶಿಯಸ್ ಕಾಲೇಜು, ಮಂಗಳೂರು), ಖುದ್ಸಿಯಾ ಬೇಗಂ (ಸೇಂಟ್ ಅಲೋಶಿಯಸ್ ಕಾಲೇಜು ಮಂಗಳೂರು), ವಿಷ್ಣು ಭಟ್ (ಸೇಂಟ್ ಫಿಲೋಮಿನಾ ಕಾಲೇಜು), ಡಾ.ಮುರಳೀಧರ ನಾಯ್ಕ್ (ವಿಶ್ವವಿದ್ಯಾಲಯ ಕಾಲೇಜು, ಮಂಗಳೂರು), ನಿರ್ಮಲಾ ಶೆಣೈ (ಉಪೇಂದ್ರ ಮೆಮೋರಿಯಲ್ ಕಾಲೇಜು) ಮತ್ತು ಡಾ.ಶಾರದ ಎಂ (ಶಿರ್ವ) ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Ashika S

Recent Posts

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

2 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

19 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

25 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

32 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

49 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

50 mins ago