ಮಂಗಳೂರು: ಇಸ್ಮತ್ ಪಜೀರ್ ಅವರ ಬ್ಯಾರಿ ಪುಸ್ತಕ ‘ಪಾಲ’ ಬಿಡುಗಡೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಪ್ರಕಟಿಸಿರುವ ಇಸ್ಮತ್ ಪಜೀರ್ ಅವರು ಬರೆದ ಬ್ಯಾರಿ ವಿಮರ್ಶಾ ಲೇಖನಗಳ ಸಂಕಲನ ‘ಪಾಲ’ವನ್ನು ಶನಿವಾರ ಮಂಗಳೂರಿನ ವಿಶ್ವವಿದ್ಯಾನಿಲಯದ ಡಾ.ಶಿವರಾಮ ಕಾರಂತ ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ನಿರ್ದೇಶಕ ಪ್ರೊ.ಸೋಮಣ್ಣ ಹೊಂಗಳ್ಳಿ, ಯುವಜನತೆಯಿಂದ ಬ್ಯಾರಿ ಸಾಹಿತ್ಯ ಬೆಳೆಯುತ್ತದೆ. ಕಮ್ಮಟಗಳನ್ನು ಆಯೋಜಿಸಿ ಸೂಕ್ತ ತರಬೇತಿ ನೀಡುವ ಮೂಲಕ ಬ್ಯಾರಿ ಸಾಹಿತ್ಯದಲ್ಲಿ ಗುಣಮಟ್ಟದ ಕೃತಿಗಳು ಹೊರಬರುವಂತೆ ನೋಡಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿವಿ ಪ್ರಸಾರಾಂಗ ಉಪನಿರ್ದೇಶಕ ಡಾ.ಧನಂಜಯ ಕುಂಬ್ಳೆ ಮಾತನಾಡಿ, ‘ಕರಾವಳಿಯಲ್ಲಿ ಬೌದ್ಧಿಕ ಲೇಖಕರ ಸಂಖ್ಯೆ ತೀರಾ ಕಡಿಮೆ. ಇತ್ತೀಚಿನ ದಿನಗಳಲ್ಲಿ ಬ್ಯಾರಿ ಮುಸ್ಲಿಂ ಸಮುದಾಯದ ಲೇಖಕರು ಸೈದ್ಧಾಂತಿಕ ದೃಷ್ಟಿಕೋನದಿಂದ ಬರೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಒಂದು ಭಾಷೆಯ ಪ್ರಕಟಿತ ಕೃತಿಗಳ ಕುರಿತ ವಿಮರ್ಶಾ ಸಂಕಲನ ಆ ಭಾಷೆಯ ಪ್ರೌಢಿಮೆಗೆ ಸಾಕ್ಷಿಯಾಗಿದೆ’ ಎಂದರು.

ಬ್ಯಾರಿ ವಾರ್ತೆ ಮಾಸಿಕ ಉಪ ಸಂಪಾದಕ ಮುಹಮ್ಮದಲಿ ಕಮ್ಮರಡಿ ಮಾತನಾಡಿ, ‘ಬ್ಯಾರಿ ಸಾಹಿತ್ಯ ಅಕಾಡೆಮಿಯಲ್ಲಿ ಬ್ಯಾರಿ ಅಧ್ಯಯನ ಪೀಠಕ್ಕೆ ಹೆಚ್ಚಿನ ಜವಾಬ್ದಾರಿ ಇದೆ. ಆಸಕ್ತಿಯಿಂದ ಬರೆಯುವ ಯುವ ಲೇಖಕರನ್ನು ಉತ್ತೇಜಿಸಲು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಬಹುದು ಎಂದರು.

ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಸಾಹಿತಿ ಅಬ್ದುಲ್ ಖಾದರ್ ಕುಥೆತ್ತೂರು, ‘ಬ್ಯಾರಿ ಭಾಷೆಯಲ್ಲಿ ಪ್ರಕಟವಾಗಿರುವ ಕೃತಿಗಳ ಕುರಿತು ಪರಾಮರ್ಶೆ ಮಾಡಿರುವ ಲೇಖನಗಳ ಸಂಗ್ರಹ ಇದೇ ಪ್ರಥಮ ಬಾರಿಗೆ ಪ್ರಕಟವಾಗುತ್ತಿದೆ. ಬ್ಯಾರಿಯಲ್ಲಿ ವಿಮರ್ಶಾ ಸಂಕಲನ ಪ್ರಕಟವಾಗದ ಕೊರತೆ ನೀಗಿಸಿದೆ ಎಂದರು.

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಪ್ರಾಂಶುಪಾಲೆ ಡಾ.ಅನಸೂಯಾ ರೈ ಅತಿಥಿಯಾಗಿ ಭಾಗವಹಿಸಿದ್ದರು. ಲೇಖಕ ಇಸ್ಮತ್ ಪಜೀರ್ ಕೃತಿ ರಚನೆ ಕುರಿತು ಮಾತನಾಡಿ ಅನುಭವ ಹಂಚಿಕೊಂಡರು. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಪ್ರೊ.ಅಬೂಬಕರ್ ಸಿದ್ದೀಕ್ ಅತಿಥಿಗಳನ್ನು ಸ್ವಾಗತಿಸಿದರು. ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾದ ಅಹ್ಮದ್ ಬಾವ ಪಡೀಲ್ ವಂದಿಸಿದರು. ಉಪನ್ಯಾಸಕಿ ಶಹಲಾ ರೆಹಮಾನ್ ಸಮಾರಂಭವನ್ನು ನಿರೂಪಿಸಿದರು.

Sneha Gowda

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

17 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

18 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

33 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

35 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago