News Karnataka Kannada
Thursday, May 02 2024
ಕ್ಯಾಂಪಸ್

ಮಂಗಳೂರು: ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

Chamarajanagar: District-level job fair to be held on Jan. 20
Photo Credit : Pixabay

ಮಂಗಳೂರು: ಅಕ್ಟೋಬರ್ 18, 2022 ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ, ಶಿಕ್ಷಕ ರಕ್ಷಕ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಹಯೋಗದಲ್ಲಿ ಉದ್ಯೋಗ ಮೇಳ ವನ್ನು ಆಯೋಜಿಸಲಾಯಿತು.

ಭಾರತೀಯ ಕೈಗಾರಿಕೆಗಳ ಒಕ್ಕೂಟ ಮಾಜಿ ಅಧ್ಯಕ್ಷ ಜೀವನ್ ಸಾಲ್ದಾನ್ಹಾ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿ ಕಾಲ ಬದಲಾದಂತೆ ಉದ್ಯೋಗದ ಸ್ವರೂಪವು ಬದಲಾಗುತ್ತಿದೆ. ಹಾಗಾಗಿ ಉದ್ಯೋಕಾಂಕ್ಷಿಗಳು ಬದಲಾದ ಉದ್ಯೋಗದ ಅವಶ್ಯಕತೆಗಳಿಗನುಗುಣವಾಗಿ ಸೂಕ್ತ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕುಎಂದು ಹೇಳಿದರು

ಕಾಲೇಜಿನ ಸಂಚಾಲಕ ರೆ| ಫಾ| ಬೊನವೆಂಚರ್ ನಝರತ್ ಅಧ್ಯಕ್ಷತೆ ವಹಿಸಿ ಮಾತನಾಡಿ ತನ್ನ ವಿದ್ಯಾಸಂಸ್ಥೆಗಳಲ್ಲಿ ಕಲಿತ ಮೇಳದ ವಿದ್ಯಾರ್ಥಿಗಳು ಹಾಗೂ ಅರ್ಹ ವಿದ್ಯಾ ವಂತರಿಗೆ ಸೂಕ್ತ ಉದ್ಯೋಗಾವಕಾಶ ಗಳನ್ನು ಕಲ್ಪಿಸಿಕೊಡುವುದು ಪ್ರತಿ ವಿದ್ಯಾಸಂಸ್ಥೆಯ ಹೊಣೆಗಾರಿಕೆ ಎಂದು ಹೇಳಿದರು.

ಶಿಕ್ಷಕ ರಕ್ಷಕ ಸಮಿತಿಯ ಅಧ್ಯಕ್ಷೆ ಪ್ಯಾಟ್ಸಿ ವಾಸ್, ಹಳೆ ವಿದ್ಯಾರ್ಥಿ ಸಮಿತಿಯ ಅಧ್ಯಕ್ಷೆ ರೈನಾ ಡಿ ಕುನ್ಹಾ,ಮತ್ತು ಆಡಳಿತ ಮಂಡಳಿಯ ಸದಸ್ಯರಾದ ಶ್ರೀಯುತ ಅಲ್ವಿನ್ ರೋಸಾರಿಯೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರ ಫಾ| ಮೈಕಲ್ ಸಂತುಮಾಯ‌ ಸ್ವಾಗತಿಸಿದರು. ಸುಮಾರು 70 ಕಂಪೆನಿಗಳ ಭಾಗವಹಿಸುವಿಕೆ, ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನೊಳಗೊಂಡಂತೆ ಸುಮಾರು 2000 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಹಾಗೂ ಉದ್ಯೋಗದಾತರು ಈ ಉದ್ಯೋಗಮೇಳದ ಪ್ರಯೋಜನವನ್ನು ಪಡೆದರು.

ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ರೆ| ಫಾ| ಮೈಕೆಲ್, ಸಾಂತುಮಯೋರ್ ಸ್ವಾಗತಿಸಿದರು ವಿದ್ಯಾರ್ಥಿನಿ ಅನುಷಾ ಕಾರ್ಯಕ್ರಮ ನಿರೂಪಿಸಿ, ಪ್ಲೇಸ್‌ಮೆಂಟ್ ಅಧಿಕಾರಿ ಅದಿರಾ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು