News Karnataka Kannada
Sunday, May 12 2024
ಕ್ಯಾಂಪಸ್

ಮಂಗಳೂರು: ಮಿಲಾಗ್ರಿಸ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

Mangaluru: Kannada Rajyotsava Day celebrations at Milagres College
Photo Credit : News Kannada

ಮಂಗಳೂರು: ನವೆಂಬರ್ 09 2022 ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜು ಐಕ್ಯೂಎಸಿ ಮತ್ತು ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು, ಬೆಸೆಂಟ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಗಿರಿಯಪ್ಪ ಇವರು
‘ಕನ್ನಡ ನಾಡು ನುಡಿ’ ಎಂಬ ವಿಷಯದ ಕುರಿತು ಮಾತನಾಡಿ ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಅದು ಕರುನಾಡ
ನೆಲ, ಜಲ, ಜನ, ಬದುಕು, ಸಾಹಿತ್ಯ, ಸಂಸ್ಕೃತಿ, ಕಲೆ, ಸಂಗೀತ ಎಲ್ಲವನ್ನೂ ಒಳಗೊಂಡಿದೆ. ಕಲಿಯೋಕೆ ಕೋಟಿ ಭಾಷೆ, ಆಡೋಕೆ
ಒಂದೇ ಭಾಷೆ ಕನ್ನಡ… ಕನ್ನಡ. ಕಸ್ತೂರಿ. ಕನ್ನಡ. ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು. ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು. “ಕನ್ನಡ ಭಾಷೆ ನಮ್ಮ ಸಂಸ್ಕೃತಿ”, ಭಾರತವು ಶ್ರೀಮಂತ ಸಂಸ್ಕೃತಿಯನ್ನು ಹೊಂದಿದೆ ಮತ್ತು ಅದು ನಮ್ಮ ಗುರುತಾಗಿದೆ. ಧರ್ಮ, ಕಲೆ, ಬೌದ್ಧಿಕ ಸಾಧನೆಗಳು ಅಥವಾ ಪ್ರದರ್ಶನ ಕಲೆಗಳಲ್ಲಿ ಅದು ನಮ್ಮನ್ನು ವರ್ಣರಂಜಿತ, ಶ್ರೀಮಂತ ಮತ್ತು ವೈವಿಧ್ಯಮಯ ರಾಷ್ಟ್ರವನ್ನಾಗಿ ಮಾಡಿದೆ ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಿದರು.

ಮಿಲಾಗ್ರಿಸ್ ಕಾಲೇಜಿನ ಉಪ ಪ್ರಾಂಶುಪಾಲರಾದ ಕ್ಸಾಸ್ಸಿನ ರೋಡ್ರಿಗೆಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಸಂಯೋಜಕಿ, ಹಾಗೂ ವಿಭಾಗದ ಮುಖ್ಯಸ್ಥೆ ಸೌಮ್ಯ ಕೋಟ್ಯಾನ್ ಸ್ವಾಗತಿಸಿದರು, ವಿದ್ಯಾರ್ಥಿಗಳಾಗಿರುವ ಅರ್ಪಿತಾ ಕಾರ್ಯಕ್ರಮ ನಿರೂಪಿಸಿರು, ಜೋಯಿಲಿನ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು