News Karnataka Kannada
Wednesday, May 08 2024
ಕ್ಯಾಂಪಸ್

ಮಂಗಳೂರು: 80 ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ

Mangaluru: More than 80 people donate blood
Photo Credit :

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ ಕ್ರಾಸ್‌ ಘಟಕ, ಎನ್‌ಎಸ್‌ಎಸ್‌, ವಿದ್ಯಾರ್ಥಿ ಸಂಘ, ಭಾರತೀಯ ರೆಡ್‌ ಕ್ರಾಸ್‌ ಮಂಗಳೂರು, ಲಯನ್ಸ್‌ ಕ್ಲಬ್‌ ಮಂಗಳೂರು ನೇತ್ರಾವತಿ, ಲೇಡಿಗೋಷನ್‌ ಆಸ್ಪತ್ರೆಗಳ ಸಹಯೋಗದೊಂದಿಗೆ ರವೀಂದ್ರ ಕಲಾಭವನದಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ನಡೆಯಿತು.

ಶಿಬಿರ ಉದ್ಘಾಟಿಸಿದ ರೆಡ್‌ ಕ್ರಾಸ್‌ ಬ್ಲಡ್‌ ಬ್ಯಾಂಕ್‌ನ ಆರೋಗ್ಯಾಧಿಕಾರಿ ಡಾ. ಜೆ ಎನ್‌ ಭಟ್‌, ರಕ್ತದಾನ ಸಮಾಜಕ್ಕೆ ಸಹಾಯ ಮಾಡುವ ಅತ್ಯಂತ ಸರಳ ವಿಧಾನ. ರಕ್ತದಾನದಿಂದ ಏನನ್ನೂ ಕಳೆದುಕೊಳ್ಳದೆ, ಅಮೂಲ್ಯ ಜೀವಗಳನ್ನು ಉಳಿಸುವ ಅವಕಾಶ ನಮ್ಮ ಕೈಯಲ್ಲಿದೆ, ಎಂದರು. ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಶೈಕ್ಷಣಿಕ ಕಾರ್ಯಚಟುವಟಿಕೆಗಳ ಒತ್ತಡದ ನಡುವೆಯೂ ರಕ್ತದಾನ ಶಿಬಿರ ಆಯೋಜಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ ಕ್ರಾಸ್‌ ನೋಡಲ್‌ ಅಧಿಕಾರಿ ಡಾ. ಗಣಪತಿ ಗೌಡ, ಕಾಲೇಜಿನ ಯುವ ರೆಡ್‌ ಕ್ರಾಸ್‌ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಉಪನ್ಯಾಸಕರೂ ಸೇರಿದಂತೆ 80 ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ರಕ್ತದಾನ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು