News Karnataka Kannada
Friday, May 03 2024
ಕ್ಯಾಂಪಸ್

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಅಭಿವ್ಯಕ್ತಿ ವೇದಿಕೆಯ ವಾರ್ಷಿಕ ಚಟುವಟಿಕೆ ಉದ್ಘಾಟನೆ

Moodbidri: Inauguration of the annual activity of the Expression Forum at Alva's
Photo Credit : News Kannada

ಮೂಡುಬಿದಿರೆ: ಕೇವಲ ಕೌಶಲ ಇದ್ದರೆ ಸಾಲದು. ಅದರ ಅನುಷ್ಠಾನಕ್ಕೆ ಜ್ಞಾನವೂ ಮುಖ್ಯ ಎಂದ ಅವರು, ಕನ್ನಡ ಭಾಷೆಯು ದೇಸಿತನವನ್ನು ಹೊಂದಿದೆ. ಹಿರಿಯರು ಅಭಿವ್ಯಕ್ತಿಯ ಮೂಲಕವೇ ನಾಡನ್ನು ಕಟ್ಟಿದ್ದಾರೆ. ಸ್ವಾಭಿಮಾನ, ಸಾಮರಸ್ಯ ಸೇರಿದಂತೆ ಮಾನವೀಯ ಮೌಲ್ಯಗಳಿಂದ ಅಭಿವ್ಯಕ್ತಗೊಳಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ. ಹೇಳಿದರು.

ಆಳ್ವಾಸ್ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅಭಿವ್ಯಕ್ತಿ 2023 ವೇದಿಕೆಯ ವಾರ್ಷಿಕ ಚಟುವಟಿಕೆಗಳನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಕೌಶಲಕ್ಕೆ ವಿಭಾಗದ ಅಭಿವ್ಯಕ್ತಿ ವೇದಿಕೆಯು ಅವಕಾಶ ಕಲ್ಪಿಸಿದೆ ಎಂದರು. ವೇದಿಕೆಯ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಭಿವ್ಯಕ್ತಿ ವೇದಿಕೆಯ ಸಂಯೋಜಕಿ ದಿಶಾ ಗೌಡ, ಸಹ ಸಂಯೋಜಕ ವೈಶಾಖ್ ಮಿಜಾರು ಉಪಸ್ಥಿತರಿದ್ದರು. ಚಿದಾನಂದ ಸ್ವಾಗತಿಸಿದರು. ಅಕ್ಷಯ್ ಕುಮಾರ್ ವಿದ್ಯಾರ್ಥಿ ವೇದಿಕೆಯ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಉಮರ್ ಫಾರುಕ್ ಅತಿಥಿಗಳನ್ನು ಪರಿಚಯಿಸಿದರು. ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು. ಶಿಲ್ಪಾ ಕುಲಾಲ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು