News Karnataka Kannada
Monday, May 06 2024
ಪರಿಸರ

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Moodbidri: World Environment Day at The Excellent Institute of Excellence
Photo Credit : News Kannada

ಮೂಡುಬಿದಿರೆ: ಪರಿಸರವನ್ನು ಸ್ವಚ್ಛವಾಗಿ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಪ್ರತಿದಿನ ನಾವು ಬಳಸುವ ವಸ್ತುಗಳನ್ನು ಹಸಿ ಕಸ ಮತ್ತು ಒಣ ಕಸ ಮತ್ತು ಅಪಾಯಕಾರಿ ಕಸವೆಂದು ಮೂರು ಭಾಗಗಳಲ್ಲಿ ವಿಂಗಡಿಸಿ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕು ಪರಿಸರವನ್ನು ಮಾಲಿನ್ಯ ಮುಕ್ತಗೊಳಿಸಿ ಮುಂದಿನ ಪೀಳಿಗೆಗೆ ಸ್ವಚ್ಛ ಸುಂದರ ಪರಿಸರವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಪುರಸಭೆಯ ಪರಿಸರ ಅಭಿಯಂತರೆ ಶಿಲ್ಪಾ ಎಸ್. ಹೇಳಿದರು.

ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹಸಿರು ನಿಶಾನೆ ತೋರಿಸುವ ಮೂಲಕ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.

ಎಕ್ಸೆಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಪರಿಸರ, ಶುಚಿತ್ವದ ಕುರಿತು ಮಾತನಾಡಿದರು.

ಪುರಸಭೆ ಮುಖ್ಯಾಧಿಕಾರಿ ಶಿವ ನಾಯ್ಕ್ ಸ್ವಚ್ಛತಾ ಅಭಿಯಾನದ ಪ್ರತಿಜ್ಞಾ ವಿಧಿ ಭೋಧಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಮೂಡುಬಿದಿರೆ ಪುರಸಭಾ ಸದಸ್ಯರಾದ ಸುಜಾತ ಶಶಿಧರ್ ಮತ್ತಿತರು ಉಪಸ್ಥಿತರಿದ್ದರು. ಶಿಕ್ಷಕ ರೇಣುಕಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು