ಮೂಡುಬಿದಿರೆ: ಬನ್ನಡ್ಕದಲ್ಲಿರುವ ವಿಶ್ವ ವಿದ್ಯಾನಿಲಯ ಕಾಲೇಜು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು.
ಡಾ.ರಾಯಿ ರಜತ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಉತ್ತಮ ಆರೋಗ್ಯಕ್ಕಾಗಿ ಪಾಲಿಸಬೇಕಾದ ದಿನಚರಿ, ಆರೋಗ್ಯ ಪದ್ಧತಿ, ಆರೋಗ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಶಿಕಲಾ ಎನ್., ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಪುಷ್ಪಲತಾ, ಕಾರ್ಯದರ್ಶಿ ರಚನಾ, ಸಹಕಾರ್ಯದರ್ಶಿ ರಕ್ಷಿತ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರಚನಾ ನಿರೂಪಿಸಿದರು. ವರ್ಷಿತಾ ಸ್ವಾಗತಿಸಿದರು. ಸುರಕ್ಷಾ ವಂದಿಸಿದರು.