News Karnataka Kannada
Thursday, May 09 2024
ಕ್ಯಾಂಪಸ್

ಮೈಸೂರು: ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Mysuru: Prizes distributed to winners of painting competitions
Photo Credit : By Author

ಮೈಸೂರು: ಸೈನಿಕ ಅಕಾಡೆಮಿ (SAM) ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವ ಕಲಾ ದಿನಾಚರಣೆ ಅಂಗವಾಗಿ ಬೆಳವಾಡಿ ಯಲ್ಲಿರುವ ಸೈನಿಕ ಶಾಲೆಯಲ್ಲಿ 14 ವರ್ಷದ ಒಳಗಿರುವ 50ಕ್ಕೂ ಹೆಚ್ಚು ಮಕ್ಕಳು ಪರಿಸರದ ಬಗ್ಗೆ ಚಿತ್ರಕಲಾ ಸ್ಪರ್ಧೆ  ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮೊದಲನೇ ಬಹುಮಾನ ಹಂಸಶ್ರೀ , ದ್ವಿತೀಯ ತನ್ಮಯ್, ತೃತೀಯ ಯಶಸ್, ನಾಲ್ಕನೇ ಬಹುಮಾನ ಅಮೃತ, ಐದನೇ ಬಹುಮಾನ ಖುಷಿ ಬಹುಮಾನ ಪಡೆದುಕೊಂಡರು. ಸ್ಪರ್ಧಿಸಿದ ಎಲ್ಲ ಮಕ್ಕಳಿಗೂ ಅಭಿನಂದನ ಪತ್ರ ವಿತರಿಸಲಾಯಿತು.

ಸೈನಿಕ ಅಕಾಡೆಮಿ ಮೈಸೂರಿನ ಸಂಸ್ಥಾಪಕರು ಹಾಗೂ ನಿವೃತ್ತ ಕಮಾಂಡೋ ಶ್ರೀಧರ್ ಮಾತನಾಡಿ, ಪರಿಸರ ಉತ್ತಮವಾಗಿದ್ದಲ್ಲಿ ಮಾತ್ರ ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯವಿದೆ. ಭೂಮಿ, ನೀರು, ಗಾಳಿ, ಬೆಳಕು ಮೊದಲಾದವುಗಳನ್ನು ಒಳಗೊಂಡ ಪ್ರಕೃತಿ ದೇವರ ಕೊಡುಗೆ. ಅದನ್ನು ಕಾಪಾಡಿಕೊಂಡು ಹೋಗುವ ಹೊಣೆ ಎಲ್ಲರ ಮೇಲಿದೆ. ಮಕ್ಕಳಿಗೆ ಪರಿಸರದ ಪಾಠ ಮನೆಯಿಂದಲೇ ಆರಂಭವಾಗಬೇಕಿದೆ ಎಂದರು.

ಮನೋರೋಗ ತಜ್ಞರಾದ ಡಾ. ರೇಖಾ ಮನಶಾಂತಿ ಮಾತನಾಡಿ ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಕನಸು ಕಂಡರೆ ದೊಡ್ಡವರಾದ ಮೇಲೆ ನನಸು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಪಾಲಕರು ತಮ್ಮ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ದಾರಿದೀಪವಾಗಬೇಕು ಎಂದರು.

ಹಿರಿಯ ಪತ್ರಕರ್ತ ಅನಿಲ್ ಕುಮಾರ್ ಮಾತನಾಡಿ ಮಕ್ಕಳ ಚಿತ್ರಗಳನ್ನು ನೋಡುವುದು ಚಂದ, ಅವರಿಗೆ ಬರೆಯಲು ಬರದಿದ್ದರೂ ಏನೋ ಒಂದು ಚಿತ್ರ ಬರೆಯುತ್ತಾರೆ. ಎಲ್ಲರೂ ಒಂದೇ ರೀತಿ ಬರೆಯುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಆಲೋಚನೆ ಕ್ರಮಗಳಿಗೆ ಅನು ಗುಣವಾಗಿ ವಿಭಿನ್ನವಾಗಿ ಬರೆಯುತ್ತಾರೆ. ಅವರ ಕಲ್ಪನೆ ಏನಿರುತ್ತದೆ ಹಾಗೆ ಬರೆಯುತ್ತಾರೆ. ಮಕ್ಕಳಿಗೆ ಇದು ಒಳ್ಳೆಯ ವೇದಿಕೆ. ಮೈಸೂರು ನಗರದಲ್ಲಿ ಅನೇಕ ಚಿತ್ರಕಲಾ ಶಾಲೆಗಳಿವೆ. ಆ ಶಾಲೆಯ ಮಕ್ಕಳು ಇಂತಹ ಸ್ಪರ್ಧೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಸ್ವಾತಿ,ಶಿಕ್ಷಕರಾದ ರವಿ, ವಿನುತಾ, ಸುನಿತಾ, ಸಿದ್ದಾರ್ಥ್, ಗಗನ್, ವಿಜಯಕುಮಾರ್ ಮುಂತಾದವರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು