News Karnataka Kannada
Friday, May 10 2024
ಕ್ಯಾಂಪಸ್

ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

National Seminar at SDM Post Graduate Centre, Ujire
Photo Credit : News Kannada

ಉಜಿರೆ:  ರೋಗಿಗಳ ಮಾನಸಿಕ ಹೊಯ್ದಾಟವನ್ನೂ ಸಕಾಲಿಕವಾಗಿ ಗುರುತಿಸಿ ಸಮಸ್ಯೆಗೆ ಪರಿಹಾರದ ದಾರಿ  ತೋರಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಯೆನಪೋಯ ಮೆಡಿಕಲ್‌ಕಾಲೇಜಿನ ಮನೋವೈದ್ಯಶಾಸ್ತ್ರದ ಮುಖ್ಯಸ್ಥ ಡಾ.ಅನಿಲ್ ಕಾಕುಂಜೆ ತಿಳಿಸಿದರು.

ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‌ನಲ್ಲಿ ಕಾಲೇಜಿನ ಮನಃಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ‘ಸಾಮಾಜಿಕ ಹಿತರಕ್ಷಣೆಯಲ್ಲಿ ಮನಃಶಾಸ್ತ್ರಜ್ಞರ ಪಾತ್ರ’ ಕುರಿತು ಬುಧವಾರ ಆಯೋಜಿಸಿದ್ದಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯಳಿದ್ದೂ ವೈದ್ಯರು ರೋಗಿಗಳ ದೈಹಿಕ ನೋವಿನ ಮೂಲ ಕಾರಣವನ್ನು ಪತ್ತೆಹಚ್ಚುವಲ್ಲಿ ವಿಫಲರಾಗುತ್ತಾರೆ. ಬಹಳಷ್ಟು ಪ್ರಕರಣಗಳಲ್ಲಿ ದೈಹಿಕ ನೋವಿನ ಮೂಲಕಾರಣ ವ್ಯಕ್ತಿಯ ಮಾನಸಿಕ ಸ್ಥಿತಿಗೆ ಸಂಬಂಧಿಸಿದ್ದಾಗಿರುತ್ತದೆ. ದೈಹಿಕ ನೋವು ಇರದಿದ್ದರೂಇದೆ ಎಂಬ ಭ್ರಮೆಯ ವರ್ತುಲದಲ್ಲಿ ಸಿಲುಕುವ ವ್ಯಕ್ತಿತಾನೇ ಸೃಷ್ಟಿಸಿಕೊಂಡ ಮಾನಸಿಕ ತೊಳಲಾಟದ ನಡುವೆ ಒದ್ದಾಡುತ್ತಿರುತ್ತಾನೆ. ವೈದ್ಯಕೀಯ ಪರೀಕ್ಷೆಯ ವರದಿಗಳನ್ನು ನೋಡಿದಾಗ ವೈದ್ಯರು ಆ ವ್ಯಕ್ತಿಯ ಮಾನಸಿಕ ಸ್ಥಿತಿಗತಿಯನ್ನು ಅವಲೋಕಿಸಿ ತಕ್ಷಣವೇ ಮನಃಶಾಸ್ತ್ರಜ್ಞರು ಮತ್ತು ಮನೋವೈದ್ಯರ ಬಳಿಗೆ ಕಳುಹಿಸಿಕೊಡಬೇಕು. ವೈದ್ಯಕೀಯ ತಪಾಸಣೆಯ ನೆಪದಲ್ಲಿ ಮನೋಚಿಕಿತ್ಸೆಯ ಸಾಧ್ಯತೆಗಳನ್ನು ಮೊಟಕುಗೊಳಿಸಬಾರದು ಎಂದು ಹೇಳಿದರು.

ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿದ್ದಾಗ ಮಾತ್ರ ಮನುಷ್ಯ ಆರೋಗ್ಯವಂತನೆನಿಸಿಕೊಳ್ಳುತ್ತಾನೆ. ಬಹುತೇಕ ಮಂದಿ ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವಲ್ಲಿ ಹೆಚ್ಚು ಗಮನಹರಿಸುವುದಿಲ್ಲ. ಮಾನಸಿಕ ಸಮಸ್ಯೆಗಳು ಕಂಡು ಬಂದಲ್ಲಿ ಸೂಕ್ತ ವೈದ್ಯರನ್ನು ಭೇಟಿ ಮಾಡಲು ಹಿಂಜರಿಯುತ್ತಾರೆ.ಮಾನಸಿಕ ಸಮಸ್ಯೆಗಳು ಎದುರಾದಾಗ ಹಿಂಜರಿಯದೆ ವೈದ್ಯರೊಂದಿಗೆ ಸಮಾಲೋಚನೆ ನಡೆಸುವುದು ಸೂಕ್ತ ಎಂದರು.

21ನೇ ಶತಮಾನದಲ್ಲಿಯೂ ಮನಸ್ಸಿಗೆ ಸಂಬಂಧಿಸಿದ ಕಾಯಿಲೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಾದ ಅವಶ್ಯಕತೆ ಇದೆ. ದೈಹಿಕ ಸಮಸ್ಯೆಗಳನ್ನು ಪತ್ತೆಹಚ್ಚಲು ಹಲವಾರು ಪರೀಕ್ಷಾ ವಿಧಾನಗಳಿವೆ. ಆದರೆ ಮಾನಸಿಕ ಸಮಸ್ಯೆಗಳನ್ನು ಪತ್ತೆ ಹಚ್ಚುವುದು ಅಷ್ಟು ಸುಲಭವಲ್ಲ ಮನೋಸಂಬಂಧಿ ಖಾಯಿಲೆಗಳು ದೈಹಿಕ ಕಾಯಿಲೆಗಳಿಗಿಂತ ಅಪಾಯಕಾರಿ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲ ಡಾ.ಕುಮಾರ ಹೆಗ್ಡೆ ಬಿ ಎಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಶ್ಚಿಮಾತ್ಯ ಸಂಸ್ಕೃತಿಯ ಜೀವನ ಶೈಲಿಯ ಅನುಕರಣೆಯ ಪ್ರಭಾವದಿಂದ ಇಂದಿನ ಯುವಕರು ಹಲವಾರು ಮಾನಸಿಕ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಪ್ರತಿಯೊಬ್ಬರೂ ಜೀವನ ನಿರ್ವಹಣೆಯ ಮಹತ್ವವನ್ನುಅರಿತುಕೊಂಡು ಸಂತೋಷದಿಂದ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯಎಂದರು.

ಈ ಸಂದರ್ಭದಲ್ಲಿ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ‘ಮೆಗಾ ಮೈಂಡ್’ ನಿಯತಕಾಲಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್‌ ಡಾ.ವಿಶ್ವನಾಥ ಪಿ.ಕಾಲೇಜಿನ ವಿವಿಧ ವಿಭಾಗದ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥೆ ಡಾ.ವಂದನಾ ಜೈನ್ ಸ್ವಾಗತಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕ, ಸಂಘಟನಾ ಕಾರ್ಯದರ್ಶಿ ಡಾ.ಮಹೇಶ್ ಬಾಬು ವಂದಿಸಿದರು. ವಿದ್ಯಾರ್ಥಿಗಳಾದ ಸಂಜಿತಾ, ಅಜಿತ್‌ಕುಮಾರ್, ದೀಕ್ಷಾ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು