ಎಸ್.ಡಿ.ಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಲ್ಲಿ ಎನ್.ಇ.ಪಿ ಕಾರ್ಯಾಗಾರ

ಉಜಿರೆ: ಎಸ್.ಡಿ.ಎಂ ಸಂಸ್ಥೆಯು ಶಿಕ್ಷಣಕ್ಕೆ ಪ್ರಾಯೋಗಿಕ ಸ್ಪರ್ಶ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಎನ್.ಇ.ಪಿ ಮೂಲಕ ಪ್ರಯೋಗಶೀಲ ಹೆಜ್ಜೆಯನ್ನು ಇಟ್ಟಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಹೇಳಿದರು.

ಅವರು ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಎಸ್‌ಡಿಎಂ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಾಪಕರ ‘ವನಶ್ರೀ’ ಸಂಘದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ, ಸಸ್ಯಶಾಸ್ತ್ರದ ಎನ್.ಇ.ಪಿ ಪಠ್ಯಕ್ರಮದ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಶನಿವಾರ ಉದ್ಘಾಟಿಸಿ ಮಾತನಾಡಿದರು.

ಜ್ಞಾನ, ಕೌಶಲ್ಯ ಮತ್ತು ಮನೋಧರ್ಮ ಈ ಮೂರನ್ನೂ ಒಳಗೊಂಡ ಸಂಯೋಜಿತ ವ್ಯವಸ್ಥೆಯೇ ಎನ್.ಇ.ಪಿ. ಆದ್ದರಿಂದ ಪಠ್ಯದ
ಜೊತೆಗೆ ಪ್ರಾಯೋಗಿಕ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ, ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ತಲುಪುತ್ತದೆ ಎಂದು
ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅತಿಥಿ ಮಂಗಳೂರಿನ ಜಿ.ಎಫ್.ಜಿ ಕಾಲೇಜಿನ ಪ್ರಾಂಶುಪಾಲರಾದ ಜಯಕರ ಭಂಡಾರಿ ಮಾತನಾಡಿದರು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದೇಶಗಳಿಗೆ ಹೋದಾಗ, ನಾವು ಕಲಿತ ಪದವಿಯನ್ನು ಹೆಚ್ಚಾಗಿ ಪರಿಗಣಿವುದಿಲ್ಲ. ಬದಲಾಗಿ ಅದಕ್ಕೆ ಪೂರಕವಾದ ಒಂದು ವರ್ಷದ ಪ್ರಾಯೋಗಿಕ ಕೋರ್ಸ್ ಪೂರೈಸಬೇಕಾಗುತ್ತದೆ. ಇದೇ ನೆಲೆಯಲ್ಲಿ ಎನ್.ಇ.ಪಿ ಪರಿಕಲ್ಪನೆ ರೂಪುಗೊಂಡಿದೆ ಎಂದರು.

ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಎನ್. ಉದಯಚಂದ್ರ ಮಾತನಾಡಿ, ಶಿಕ್ಷಣದಲ್ಲಿ ಯಾವುದೇ ಪಠ್ಯ ಮತ್ತು ಪ್ರಾಯೋಗಿಕ ಅಭ್ಯಾಸಗಳನ್ನು ಅಳವಡಿಸಿಕೊಂಡರೂ, ಅದರ ಹೊರತಾದ ಓದುಗಳೂ ವಿದ್ಯಾರ್ಥಿಗಳಿಗೆ ಅಷ್ಟೇ ಮುಖ್ಯವಾಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರಿನ ಜಿ.ಎಫ್.ಜಿ ಕಾಲೇಜಿನ ಪ್ರಾಂಶುಪಾಲರಾದ ಜಯಕರ ಭಂಡಾರಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ.ಎನ್. ಉದಯಚಂದ್ರ ಮಂಗಳೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಾಪಕರ ಸಂಘ ‘ವನಶ್ರೀ’ ಅಧ್ಯಕ್ಷ, ಎಸ್.ಡಿ.ಎಂ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಕುಮಾರ್ ಹೆಗ್ಡೆ ಬಿ.ಎ ಉಪಸ್ಥಿತರಿದ್ದರು.

ಡಾ. ಗಣೇಶ್ ವಿ. ಶಿಂಧೆ ಕಾರ್ಯಕ್ರಮ ನಿರೂಪಿಸಿದರು. ಪ್ರಾಸ್ತಾವಿಕವಾಗಿ ಡಾ. ಕುಮಾರ್ ಹೆಗ್ಡೆ ಮಾತನಾಡಿದರು. ‘ವನಶ್ರೀ’ ಕಾರ್ಯದರ್ಶಿ ವಿನಾಯಕ್ ವಂದಿಸಿದರು.

 

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago