ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ವತ್ಸಲಾ ರಾಜ್ಞಿ ಇವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಅತಿ ಮುಖ್ಯವಾದ ಘಟ್ಟ ಈ ವಯಸ್ಸು ಮಕ್ಕಳಿಗೆ ವರವೂ ಹೌದು ಶಾಪವೂ ಹೌದು. ಭವಿಷ್ಯದ ಕನಸುಗಳಿಗೆ ಈ ವಯಸ್ಸು ಅಡಿಪಾಯ ಅದೇ ರೀತಿ ಮಕ್ಕಳು‌ ದಾರಿ ತಪ್ಪುವ ಸಾಧ್ಯತೆಗಳು ಹೆಚ್ಚು ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯ ಅತಿ ಮುಖ್ಯ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಲೇಜಿನಲ್ಲಿರುವ ಎಲ್ಲಾ ಸವಲತ್ತುಗಳನ್ನು ಹಾಗೂ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆಗೈದು ಕಾಲೇಜಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರುವಂತವರಾಗಬೇಕು ಎಂದು ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ಇವರು ಕಾಲೇಜಿನ ನೀತಿ ನಿಯಮಗಳ ಪರಿಚಯ ನೀಡಿದರು. ಕಾಲೇಜಿನ ವಸತಿನಿಲಯದ ನಿಯಮಗಳ ಬಗ್ಗೆ ಮುಖ್ಯ ನಿಲಯ‌ ಪಾಲಕರಾದ ಚೇತನ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋಪಾಲಕೃಷ್ಣ ಭಟ್, ಸದಸ್ಯರಾದ ಡಾ. ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅರುಣಾ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ದೀಪ್ತಿ ಹಾಗೂ ಶ್ರುತಿ ಪ್ರಾರ್ಥಿಸಿದರು. ಉಪನ್ಯಾಸಕಿ ಯಶವಂತಿ ವಂದಿಸಿದರು.

Gayathri SG

Recent Posts

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

12 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

27 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

39 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

3 hours ago