ಕ್ಯಾಂಪಸ್

ಪುತ್ತೂರು: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನಃಸ್ಥಿತಿ ಬೆಳೆಸಿಕೊಳ್ಳಬೇಕು -ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಅಂಬಿಕಾ ವಿದ್ಯಾಲಯ(ಸಿಬಿಎಸ್‍ಸಿ) ಇದರ ವತಿಯಿಂದ ಪ್ರೌಢಶಾಲಾ ಮಕ್ಕಳಿಗಾಗಿ ಎನ್‍ಟಿಎಸ್‍ಇ, ಜೆಇಇ ಹಾಗೂ ನೀಟ್ ಫೌಂಡೇಶನ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನೆರವೇರಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್ ತರಗತಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫೌಂಡೇಶನ್ ತರಗತಿಗಳ ಪ್ರಯೋಜವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ಮನಸ್ಥಿತಿಯನ್ನು ಒಗ್ಗೂಡಿಸಬೇಕು. ಪಠ್ಯದಲ್ಲಿ ಬರುವ ಪ್ರತಿಯೊಂದು ಅನುಮಾನಗಳನ್ನು ಶಿಕ್ಷಕರಲ್ಲಿ ಕೇಳಿ ಬಗೆಹರಿಸಿಕೊಳ್ಳಬೇಕು. ಪೆÇೀಷಕರು ಮಕ್ಕಳನ್ನು ಇಂತಹ ತರಗತಿಗಳಿಗೆ ನೊಂದಾಯಿಸಿಕೊಳ್ಳುವಲ್ಲಿ ಪೆÇ್ರೀತ್ಸಾಹಿಸಬೇಕು ಎಂದು ಕರೆ ನೀಡಿದರು. ಅಂತೆಯೇ ಎನ್‍ಟಿಎಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಬಿಕಾದಲ್ಲಿ ಪಿಯುಸಿ ಇಂದ ಪದವಿಯ ತನಕ ಉಚಿತ ಶಿಕ್ಷಣ ನೀಡಲಾಗುವುದು ಎಂದು ಘೋಷಿಸಿದರು.

ಫೌಂಡೇಶನ್ ತರಗತಿಗಳ ಕುರಿತಾಗಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ಮಾಹಿತಿ ರಾಜಶ್ರೀ ಎಸ್ ನಟ್ಟೋಜ ಮಾಹಿತಿ ನೀಡಿದರು. ಫೌಂಡೇಶನ್ ತರಗತಿಗಳ ಸಂಯೋಜಕ ಅಭಿಷೇಕ್ ಎನ್ ಉಪಸ್ಥಿತರಿದ್ದು ಕಾರ್ಯಕ್ರಮ ನಿರ್ವಹಿಸಿದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago