ಪುತ್ತೂರು: ಅಂಬಿಕಾದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

ಪುತ್ತೂರು: ಭಾರತದಂತಹ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಉತ್ತಮ ಆಡಳಿತಗಾರರು ಇರಲೇಬೇಕು. ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳಿಂದ ದೇಶ ಭಕ್ತಿಯನ್ನು ಒಳಗೊಂಡಂತಹ ಉತ್ತಮ ಆಡಳಿತಗಾರರು, ರಾಜಕಾರಣಿಗಳು ಮೂಡಿಬರಬೇಕು. ಇದನ್ನು ತರಬೇತುಗೊಳಿಸುವ ನಿಟ್ಟಿನಲ್ಲಿ ಪ್ರತಿವರ್ಷವೂ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ನಾಯಕನನ್ನು ಆಯ್ಕೆ ಮಾಡಗಾಗುತ್ತಿದ್ದು ನಮ್ಮ ನಾಯಕರು ನೆರೆ ಮುಂತಾದ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಜನರಿಗೆ ಸಹಾಯ, ಗಿಡ ನೆಡುವ ಕಾರ್ಯಕ್ರಮ, ಸ್ವಚ್ಛತಾ ಕಾರ್ಯಕ್ರಮ ಮುಂತಾದ ಉತ್ತಮ ಕೆಲಸಗಳನ್ನು ಒಗ್ಗೂಡಿ ಮಾಡುತ್ತಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಸ್ಪರ್ಧಿಗಳಿಗೂ ಶುಭ ಹಾರೈಕೆಗಳು. ಅತ್ಯುತ್ತಮ ವಿದ್ಯಾರ್ಥಿ ಸಂಘ ಮೂಡಿ ಬರಲಿ ಎಂದು ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯ ಮಾನ್ಯ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯ ಅಂಗ ಸಂಸ್ಥೆ ಅಂಬಿಕಾ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿಯ ವಿದ್ಯಾರ್ಥಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು.

ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಚುನಾವಣಾಧಿಕಾರಿಗಳಾದ ಗಣಕಶಾಸ್ತ್ರ ಉಪನ್ಯಾಸಕ ಪ್ರದೀಪ್ ಕೆ ವೈ ಹಾಗೂ ಗಣಿತಶಾಸ್ತ್ರ ಉಪನ್ಯಾಸಕಿ ಶೈನಿ ಕೆ ಜೆ ಉಪಸ್ಥಿತರಿದ್ದರು. ಹಾಗೂ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಸಾಯನಶಾಸ್ತ್ರಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳು ಮತದಾನ ಮಾಡಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು.

Gayathri SG

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

5 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

17 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

35 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

43 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago