ಕ್ಯಾಂಪಸ್

ನಿಟ್ಟೆಯಲ್ಲಿ ಎಂಸಿಎ ವಿಭಾಗದ ಸ್ಯಾಮ್ಕಾ ಅನ್ಪ್ಲಗ್ಡ್

ನಿಟ್ಟೆ: ‘ತಂತ್ರಜ್ಞಾನ ಮತ್ತು ಸಂವಹನದ ಚಾತುರ್ಯತೆಯಿದ್ದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ. ಇಂದಿನ ದಿನಗಳಲ್ಲಿ ಪಠ್ಯದೊಂದಿಗೆ ವಿವಿಧ ತಾಂತ್ರಿಕ ಹಾಗೂ ವ್ಯವಸ್ಥಾಪಕ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ’ ಎಂದು ಮರ್ಸಿಡೀಸ್ & ಇಚರ್ ಸಂಸ್ಥೆಗಳಿಗೆ ಸಿಎಬಿ ಎಸ್ಸೆಂಬ್ಲಿ ಸಾಫ್ಟವೇರ್ ನ ಎಕ್ಸ್ಟರ್ನಲ್ ಕನ್ಸಲ್ಟೆಂಟ್ ಆಗಿರುವ ವಿಕ್ರಮ್ ಅರೆಕಲ್ ಅಭಿಪ್ರಾಯಪಟ್ಟರು.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗದ ವಿದ್ಯಾರ್ಥಿ ಸಂಘದ ಕಾರ್ಯಕ್ರಮವಾದ ಸ್ಯಾಮ್ಕಾ ಅನ್ಪ್ಲಗ್ಡ್ ನ್ನು ಅ.೧೪ ರಂದು ಉದ್ಘಾಟಿಸಿ ಅವರು ಮಾತನಾಡಿದರು. ‘ಪ್ಲೇಸ್ಮೆಂಟ್ ಎಂಬುದು ಐಟಿ ಕ್ಷೇತ್ರದಲ್ಲಿ ಅತಿಸುಲಭ ಎಂಬ ಒಂದು ಕಲ್ಪನೆಯಿದೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನ ಅಭಿವೃದ್ದಿಪಡಿಸಿದರಷ್ಟೇ ಸಂಸ್ಥೆಯಲ್ಲಿ ಅವಕಾಶಗಳನ್ನು ಬಾಚಿಕೊಳ್ಳಬಹುದಾಗಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ. ಐ. ರಮೇಶ್ ಮಿತ್ತಂತಾಯ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮುಂದಿನ ಒಂದು ವರ್ಷಗಳ ಕಾಲ ಎಂ.ಸಿ.ಎ ವಿಭಾಗದ ವಿದ್ಯಾರ್ಥಿ ಸಂಘವು ಹಲವಾರು ಜ್ಞಾನಾಭಿವೃದ್ದಿ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಿಳಿಸಿದರು. ಸಭಾ ಕಾರ್ಯಕ್ರಮದಲ್ಲಿ ಸ್ಯಾಮ್ಕಾ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ನಿಟ್ಟೆ ಎಂ.ಸಿ.ಎ ವಿಭಾಗದ ಮುಖ್ಯಸ್ಥೆ ಡಾ. ಮಮತಾ ಬಲಿಪಾ ಸ್ವಾಗತಿಸಿದರು. ಎಸ್.ಎ.ಎಂ.ಸಿ.ಎ ಅಧ್ಯಕ್ಷ ವೈಶಾಖ್ ಗೌಡ ಜೆ.ಎಸ್ ವಾರ್ಷಿಕ ವರದಿ ವಾಚಿಸಿದರು. ಎಸ್.ಎ.ಎಂ.ಸಿ.ಎ ಸಂಯೋಜಕಿ ಹರ್ಷಿತಾ ಜಿ.ಎಂ ಅತಿಥಿಗಳನ್ನು ಪರಿಚಯಿಸಿದರು. ಎಸ್.ಎ.ಎಂ.ಸಿ.ಎ ಕಾರ್ಯದರ್ಶಿ ಶ್ರಾವ್ಯಾ ವಂದಿಸಿದರು. ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಮತ್ತು ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿ ವರುಣ್ ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

22 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

38 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago