News Karnataka Kannada
Sunday, May 12 2024
ಮಂಗಳೂರು

ಭಾರತೀಯ ವಿಜ್ಞಾನಿಗಳಿಗೆ ಜಾಗತಿಕ ಮನ್ನಣೆ- ಡಾ.ದರ್ಶಕ್ ಆರ್.ತ್ರಿವೇದಿ

Scientist achievers will make India a developed country: Dr. Darshak R. Trivedi
Photo Credit : News Kannada

ಮಂಗಳೂರು: ಭಾರತೀಯ ವಿಜ್ಞಾನಿಗಳ ಸಾಧನೆಯನ್ನು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಈ ಸಾಧನೆಗಳು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಸೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಎನ್ಐಟಿಕೆ (ಸುರತ್ಕಲ್) ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದರ್ಶಕ್ ಆರ್ ತ್ರಿವೇದಿ ಅಭಿಪ್ರಾಯಪಟ್ಟರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ-2023ರ ಅಂಗವಾಗಿ ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗವು ಆಯೋಜಿಸಿದ್ದ ‘ರಸಾಯನಶಾಸ್ತ್ರ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಗಳು’ ಕುರಿತ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು, ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ವಿಜ್ಞಾನಿ ಸರ್.ಸಿ.ವಿ.ರಾಮನ್ ಅವರ ಆವಿಷ್ಕಾರವಾದ ‘ರಾಮನ್ ಎಫೆಕ್ಟ್’ ರಸಾಯನಶಾಸ್ತ್ರದ ಬೆಳವಣಿಗೆಯಲ್ಲಿ ಹೇಗೆ ಪ್ರಮುಖ ಪಾತ್ರ ವಹಿಸಿದೆ ಎಂಬುದನ್ನು ವಿವರಿಸಿದರು.

ಅನ್ವಯಿಕ ಸಸ್ಯಶಾಸ್ತ್ರ ಪ್ರಾಧ್ಯಾಪಕ, ಕುಲಸಚಿವ (ಪರೀಕ್ಷೆ) ಡಾ.ರಾಜು ಕೃಷ್ಣ ಚಲಣ್ಣವರ್ ಮಾತನಾಡಿ, ಸಾಮಾನ್ಯ ಜನರಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವುದು ವಿಜ್ಞಾನ ದಿನದ ಉದ್ದೇಶವಾಗಿದೆ ಎಂದರು. ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಕೆ.ಶಿವಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷೆ ಪ್ರೊ.ಬಿ.ವಿಶಾಲಾಕ್ಷಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಮತ್ತು ಕಾರ್ಯಕ್ರಮ ಸಂಘಟಕ ಡಾ.ಎಂ.ಆರ್.ಮದ್ವಾನಿ ವಂದಿಸಿದರು. ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.  ರಸಾಯನಶಾಸ್ತ್ರ ವಿಭಾಗದ ಹತ್ತು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು