ಎಸ್.ಡಿ.ಎಂ ವಿಜ್ಞಾನ ವಿದ್ಯಾರ್ಥಿಗಳು ಐಡಿಇಎ ಪ್ರಯೋಗಾಲಯಕ್ಕೆ ಭೇಟಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ವಿಜ್ಞಾನ ವಿಭಾಗದ ಇಪ್ಪತ್ತಾರು ವಿದ್ಯಾರ್ಥಿಗಳು ವಾಮಂಜೂರು ಸೈಂಟ್‌ ಜೋಸೆಫ್‌ ತಾಂತ್ರಿಕ ಕಾಲೇಜಿನ ಐಡಿಇಎ ಪ್ರಯೋಗಾಲಯಕ್ಕೆ ಇತ್ತೀಚಿಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳಿಗೆ 3ಡಿ ಪ್ರಿಂಟಿಂಗ್, ಲೇಝರ್‌ ಡಿಸೈನ್ ಪ್ರಿಂಟಿಂಗ್, ಪಿಸಿಬಿ ಪ್ರಿಂಟಿಂಗ್, ವುಡ್‌ಡಿಸೈನ್ ಪ್ರಿಂಟಿಂಗ್ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು. ಸ್ವತಃ ವಿದ್ಯಾರ್ಥಿಗಳೇ ಪ್ರಯೋಗಗಳನ್ನು ಮಾಡುವ ಮೂಲಕ ವೃತ್ತಿ ಕೌಶಲ್ಯಗಳನ್ನು ಹೆಚ್ಚಿಸಿಕೊಂಡರು. ಇಂತಹ ವಿನೂತನ ಆವಿಷ್ಕಾರಗಳಿಗೆ ಪೂರಕ ಮಾಹಿತಿಯನ್ನು ನೀಡುವ ಪ್ರಯೋಗಾಲಯಗಳು ಕರ್ನಾಟಕದಲ್ಲಿ ಕೇವಲ ನಾಲ್ಕು ತಾಂತ್ರಿಕ ಕಾಲೇಜುಗಳಲ್ಲಿವೆ.

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ ಹಾಗೂ ಸೈಂಟ್‌ ಜೋಸೆಫ್‌ ತಾಂತ್ರಿಕ ಕಾಲೇಜು (ಸ್ವಾಯತ್ತ) ವಾಮಂಜೂರು ಸಂಸ್ಥೆಗಳ ನಡುವಿನ ಒಡಂಬಡಿಕೆಯ ಪ್ರಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ಎನ್‌ ಕಾಕತ್ಕರ್, ಗಣಿತಶಾಸ್ತ್ರ ವಿಭಾಗದ ಪ್ರೊ. ಗಣೇಶ್ ನಾಯಕ್‌ ಉಪಸ್ಥಿತಿಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಸೈಂಟ್‌ ಜೋಸೆಫ್‌ ತಾಂತ್ರಿಕ ಕಾಲೇಜಿನ ಉಪಪ್ರಾಚರ‍್ಯ ಪ್ರೊ. ಚಿಪ್ಪಾರು ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಎಸ್.ಡಿ.ಎಂ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಪ್ರೊ. ಗಣೇಶ್ ನಾಯಕ್‌ ಧನ್ಯವಾದ ಸಲ್ಲಿಸಿದರು.

Gayathri SG

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

7 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

25 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

42 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

56 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago