ಮಂಗಳೂರು: ಶಕ್ತಿ ಪಿಯುಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆಕಟೀಲುದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಇಲ್ಲಿ ಮುಕ್ತಾಯಗೊಂಡ ದ.ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾರೆ.
ಮಯೂರ್ ಡಿ.ಶೆಟ್ಟಿ ದ್ವಿತೀಯ ಪಿಯುಸಿ 53ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ವಿನೀತ್ ಕುಮಾರ್ ದ್ವಿತೀಯ ಪಿಯುಸಿ 63 ಕೆಜಿ ವಿಭಾಗದಲ್ಲಿ ಚಿನ್ನದ ಪದಕ, ಧನ್ಯತ ದ್ವಿತೀಯ ಪಿಯುಸಿ 53ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ ಹಾಗೂ ಬಾಲಕರತಂಡ ಸಮಗ್ರ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.
ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯ್ಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯ್ಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪ ಪೂ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.