ಶಿವಮೊಗ್ಗ: ಕೊವಿಡ್-19 ವಿರುದ್ಧ ಯುವ ಸಮೂಹದಲ್ಲಿ ಜಾಗೃತಿ ಮೂಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಡಾ.ಎಚ್.ಎಸ್.ನಾಗಭೂಷಣ ಹೇಳಿದರು.
ಅವರು ತಮ್ಮ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕೊವಿಡ್-19 ಬೂಸ್ಟರ್ ಡೋಸ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಕಾಲೇಜು ವಿದ್ಯಾರ್ಥಿಗಳಿಗೆ ಈಗ ಸೆಮಿಸ್ಟರ್ ಪರೀಕ್ಷೆ ಆರಂಭವಾಗಿದೆ. ಈ ಸಂದರ್ಭದಲ್ಲಿ ನಾವು ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದೇವೆ. ಎಲ್ಲಿ ವಿದ್ಯಾರ್ಥಿನಿಯರು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಾರೋ ಇಲ್ಲವೋ ಎಂಬ ಆತಂತಕ ಇತ್ತು. ಆದರೆ ವಿದ್ಯಾರ್ಥಿನಿಯರು ಯಾವುದೇ ಅಳುಕಿಲ್ಲದೆ ತಮ್ಮ ಜತೆಗಿದ್ದವರೂ ಆರೋಗ್ಯವಾಗಿರಲೆಂಬ ಆಶಯದಿಂದ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಲು ಮುಂದೆ ಬಂದಿರುವುದು ಅವರಲ್ಲಿರುವ ಸಾಮಾಜಿಕ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದು ಶ್ಲಾಘಿಸಿದರು.
ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ ಮಾತನಾಡಿ ಕೊವಿಡ್-19 ಅವಧಿಯಲ್ಲಿ ಜಗತ್ತೇ ತತ್ತರಿಸಿ ಹೋಗಿತ್ತು. ಆದರೆ ಈಗ ಅದರಿಂದ ಪಾರಾಗಿ ನಿಟ್ಟುಸಿರು ಬಿಡುತ್ತಿದ್ದೇವೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರದ ಸೂಚನೆಯಂತೆ ಎನ್.ಎಸ್.ಎಸ್.ವತಿಯಿಂದ ಈ ಬೂಸ್ಟರ್ ಡೋಸ್ ಅಭಿಯಾನ ಹಮ್ಮಿಕೊಂಡಿದ್ದೇವೆ. ವಿದ್ಯಾರ್ಥಿನಿಯರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಪಾಲಕರೂ ಕೈ ಜೋಡಿಸುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮಾಧಿಕಾರಿಗಳಾದ ದೀಪಿಕಾ, ಆರೋಗ್ಯ ಇಲಾಖೆಯ ದಿವ್ಯಾ, ರೋಹನ್, ಶಿವಸ್ವಾಮಿ, ಪ್ರಾಧ್ಯಾಪಕರಾದ ಡಾ.ನರೇಂದ್ರ ನಾಯ್ಕ, ಎನ್.ಡಿ.ರಮೇಶ್, ಹಿರಿಯ ಸ್ವಯಂಸೇವಕಿಯರಾದ ನಾಗವೇಣಿ ಎನ್., ರಶ್ಮಿತಾ ಬಿ., ಸ್ಮಿತಾ ಕೆ. ಮೊದಲಾದವರು ಉಪಸ್ಥಿತರಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…