ಕ್ಯಾಂಪಸ್

ಚಿಕ್ಕಮಗಳೂರು: ಸಂತ ಕ್ಸೇವಿಯರ್‌ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟನೆ

ಚಿಕ್ಕಮಗಳೂರು:  ಸ್ಪರ್ಧಾತ್ಮಕ ಯುಗದಲ್ಲಿ ಮಾನವ ಜೀವನ ನಡೆಸುತ್ತಿದ್ದಾನೆ ಎಂದು ಎಐಟಿ ಕಾಲೇಜಿನ ಪ್ರಾಂಶು ಪಾಲ ಸಿ.ಟಿ.ಜಯದೇವ ಹೇಳಿದರು.

ತಾಲ್ಲೂಕಿನ ಬೀಕನಹಳ್ಳಿ ಸಮೀಪದ ಸಂತ  ಕ್ಸೇವಿಯರ್‌ ಆಂಗ್ಲಮಾಧ್ಯಮ ಶಾಲೆಯಲ್ಲಿ ಕೃತಕಬುದ್ದಿಮತ್ತೆ ಕುರಿತ ಸ್ಮಾರ್ಟ್‌ಕ್ಲಾಸ್‌ನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಾಲೆಯಲ್ಲಿ ಪ್ರಥಮ ಬಾರಿಗೆ ಸ್ಲಾರ್ಟ್ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯ ಬೇಕು. ಕೃತಕಬುದ್ದಿಮತ್ತೆಯು ಕಲಿಕಾ ವಿಧಾನ, ಕೌಶಲ್ಯ ಮತ್ತು ಮನೋಭಾವಗಳ ಜ್ಞಾನ ಸಂಪಾದನೆಯ ಪ್ರಕ್ರಿಯೆ ಯಾಗಿದೆ. ಈ ತಂತ್ರಜ್ಞಾವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಜ್ಞಾನವನ್ನು ಸಂಪಾದಿಸಬೇಕು ಎಂದರು.

ಹಿಂದಿನ ಕಾಲಘಟ್ಟದಲ್ಲಿ ಶಿಕ್ಷಣ ಸಾಂಪ್ರದಾಯಿಕವಾಗಿ ಬೋಧನೆಗೆ ಮಾತ್ರ ಸೀಮಿತವಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ ಬೋಧನೆ ಮತ್ತು ಕಲಿಕೆ ಒಟ್ಟೊಟ್ಟಿಗೆ ನಡೆಯಬೇಕಿದೆ. ಆ ನಿಟ್ಟಿನಲ್ಲಿ ತಾಂತ್ರಿಕತೆಯ ವಿಜ್ಞಾನ ಮತ್ತು ಗಣಿತ ಮೂಲಭೂತ ಕಲಿಕೆಗೆ ತುಂಬಾ ಉಪಕಾರಿಯಾಗಲಿದೆ ಎಂದು ತಿಳಿಸಿದರು.

ಸ್ಮಾರ್ಟ್‌ಪೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಇಂದಿನ ಸಮಯದಲ್ಲಿ ಮಾಹಿತಿಯನ್ನು ಕಲೆ ಹಾಕಲು ಬಳಸ ಲಾಗುತ್ತಿದ್ದು ಈ ತಾಂತ್ರಿಕತೆಯು ವಿದ್ಯಾರ್ಥಿಗಳ ಜೀವನವನ್ನು ಸರಳಗೊಳಿಸಿ ಅನೇಕ ಪ್ರಯೋಜನಗಳನ್ನು ನೀಡು ತ್ತಿದೆ. ಇದೇ ವೇಳೆ ಪ್ರಥಮ ಬಾರಿಗೆ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್ ಆರಂಭಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲ ರೋಷನ್ ಸಿಕ್ವೇರಾ ಕೃತಕಬುದ್ದಿಮತ್ತೆ ತಾಂತ್ರಿಕತೆಯು ವಿದ್ಯಾರ್ಥಿಗಳಲ್ಲಿ ವಿಚಾರಣಾಶಕ್ತಿಯನ್ನು ಅಭಿವೃದ್ದಿಪಡಿಸಿ ವಿಷಯವನ್ನು ವಿಶ್ಲೇ ಷಣೆ ಮಾಡಿ ವಿವಿಧ ಆಯಾಮಗಳಲ್ಲಿ ಕಲಿಕೆಯನ್ನು ಪ್ರೋತ್ಸಾಹಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.

ಈ ತಾಂತ್ರಿಕತೆಯಿಂದ ವಿದ್ಯಾರ್ಥಿಗಳಿಗೆ ಕಲಿಯಲು, ಪ್ರಯತ್ನಶೀಲರಾಗಲು ಮತ್ತು ಪರೀಕ್ಷೆಗೆ ಒಳಪಡಿಸಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ಹೇಳಿದ ವಿಷಯವನ್ನು ಅರ್ಥ ಮಾಡಿಕೊಂಡಿದ್ದಾರೆಯೇ ಅಥವಾ ಇಲ್ಲ ಎಂಬುದನ್ನು ಪರೀಕ್ಷಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಹೋಲಿ ಫ್ಯಾಮಿಲಿ ಸೇವಾ ಸಮಿತಿ ಅಧ್ಯಕ್ಷ ಬಿ.ಜಿ.ಮೋಕ್ಷಿತ್, ವಕೀಲ ಎಂ.ಬಿ.ಜಯಕೀರ್ತಿ, ಆಯೋಜಕರಾದ ಆದಿತ್ಯ, ರಾಕೇಶ್, ಶಾಲೆಯ ಆಡಳಿತ ಮಂಡಳಿಯ ಸೌಮ್ಯಶ್ರೀ, ರೇಷ್ಮಾ ಮತ್ತಿತರರು ಉಪಸ್ಥಿತರಿದ್ದರು.

Umesha HS

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

3 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

4 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

4 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

4 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

4 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

5 hours ago