ಮಂಗಳೂರು: ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ನ ೨೧ನೇ ಕಾಲೇಜು ವಾರ್ಷಿಕೋತ್ಸವ ಶುಕ್ರವಾರ ನಡೆಯಿತು.
೨೧ನೇ ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ನಡೆಯಿತು. ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಬಿಷಪ್ ಪೀಟರ್ ಪಾಲ್ ಸಲ್ಡಾನ್ಹಾ, ರಿಯೋ ಡಿಸೋಜಾ, ಹೈವನ್ ಡಿಸೋಜಾ, ವಿಲ್ಫರ್ಡ್ ಪ್ರಕಾಶ್ ಡಿಸೋಜಾ, ಅಲ್ವಿನ್ ರಿಚರ್ಡ್ ಡಿ’ಸೋಜಾ, ಪ್ರಿಯಾಂಕಾ ಜೋಸೆಫ್, ಶಕೀಲಾ ಬಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕ್ರೀಡೆಯಲ್ಲಿ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಬಳಿಕ ಬೆಸ್ಟ್ ಔಟ್ ಗೋಯಿಂಗ್ ವಿದ್ಯಾರ್ಥಿಗಳಿಗೆ ಮಂಗಳೂರು ಬಿಷಪ್ ಪೀಟರ್ ಪಾಲ್ ಸಲ್ಡಾನ್ಹಾ ಅಭಿನಂದಿಸಿದರು. ಬಳಿಕ ಮಾತನಾಡಿದ ಮುಖ್ಯ ಅತಿಥಿ ಪ್ರಿಯಾಂಕಾ ಜೋಸೆಫ್ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ನ ಹಳೆ ವಿದ್ಯಾರ್ಥಿ ಆಗಿದ್ದು ಕಾಲೇಜಿನ ಹಳೆ ನೆನಪುಗಳನ್ನು ನೆನಪಿಸಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಬಳಿಕ ಮಂಗಳೂರು ಬಿಷಪ್ ಪೀಟರ್ ಪಾಲ್ ಸಲ್ದಾನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.