ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಅಂಬಿಕಾದಲ್ಲಿ ತಾಲೂಕು ಮಟ್ಟದ ಸ್ಪರ್ಧೆಗಳು

ಪುತ್ತೂರು: ದೇಶಭಕ್ತಿಗೆ ಸಂಬಂಧಿಸಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದರಿಂದ ಮಕ್ಕಳಲ್ಲಿ ಬಾಲ್ಯದಲ್ಲೇ ರಾಷ್ಟ್ರಭಕ್ತಿ, ದೇಶದ ಬಗ್ಗೆ ಅಭಿಮಾನ ಮೂಡಲು ಸಾಧ್ಯ. ದೇಶಭಕ್ತಿಗೆ ಒತ್ತುಕೊಡುವ ಅನೇಕ ಕಾರ್ಯಕ್ರಮಗಳು ಅಂಬಿಕಾದಲ್ಲಿ ಮೂಡಿ ಬರುವುದರಿಂದ ಎಳೆವಯಸ್ಸಿನಲ್ಲೇ ದೇಶಾಭಿಮಾನ ಮೂಡುವುದರಲ್ಲಿ ಸಂದೇಹವಿಲ್ಲ ಎಂದು ಅಂಬಿಕಾದ ಆಡಳಿತ ಮಂಡಳಿಯ ಸದಸ್ಯರಾದ ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಪ್ರೊ.ಮಾಧವ ಭಟ್ ಹೇಳಿದರು.

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳು ‘ಆಜಾದೀ ಕಾ ಅಮೃತ ಮಹೋತ್ಸವ’ ಪ್ರಯುಕ್ತ ಹಮ್ಮಿಕೊಂಡ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ವಿಧ್ಯುಕ್ತವಾಗಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಅವರು ಮಾತನಾಡುತ್ತಾ ಮಕ್ಕಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ತಮ್ಮ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳಬೇಕು. ಪುಸ್ತಕದಿಂದ ಪಡೆದ ಜ್ಞಾನವು ಮನುಷ್ಯನನ್ನು ಉತ್ತುಂಗಕ್ಕೇರಿಸುತ್ತದೆ ಎಂದರು ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಟ್ಟೋಜ ಫೌಂಡೇಶನ್ ಟ್ರಸ್ಟ್ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜರು ಹಿಂದೆ ಗುರು ಮುಂದೆ ಗುರಿಯನ್ನಿಟ್ಟುಕೊಂಡು ರಾಷ್ಟ್ರಕ್ಕೆ ಅತ್ಯಾವಶ್ಯಕವಾದ ರಾಷ್ಟ್ರ ಭಕ್ತರ ಗುಂಪನ್ನು ಕಟ್ಟಬೇಕಾಗಿದೆ ಎಂದು ಹೇಳುತ್ತಾ ದೇಶಭಕ್ತಿಯನ್ನು ತುಂಬುವ ರಾಷ್ಟ್ರ ನಾಯಕರ ತ್ಯಾಗ, ಬಲಿದಾನದ ರೋಚಕ ಘಟನೆಗಳನ್ನು ಸ್ಮರಿಸುತ್ತಾ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮವನ್ನು ತುಂಬುವ ಮಾತುಗಳನ್ನಾಡಿದರು ಹಾಗೂ ಸ್ಪರ್ಧಿಗಳಿಗೆ ಶುಭ ಹಾರೈಸಿದರು. ನಂತರ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.

ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು. ನಟ್ಟೋಜ ಫೌಂಡೇಶನ್ ಟ್ರಸ್ಟ್ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಖಜಾಂಜಿ ರಾಜಶ್ರೀ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ ವಿಜೇತರನ್ನು ಅಭಿನಂದಿಸಿದರು.

ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ರಾಕೇಶ್ ಕಮ್ಮಜೆ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್, ಸಿ.ಬಿ.ಎಸ್.ಇ. ವಿದ್ಯಾಲಯದ ಪ್ರಾಚಾರ್ಯರಾದ ಮಾಲತಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ ಪ್ರಾಚಾರ್ಯರಾದ ಸುಚಿತ್ರ ಪ್ರಭು ಅತಿಥಿಗಳನ್ನು ಸ್ವಾಗತಿಸಿದರು. ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವಂದಿಸಿದರು. ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶ್ರಾವ್ಯ ವೈ ಮತ್ತು ಅರ್ಚನಾ ಪ್ರಾರ್ಥಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಅಕ್ಷತಾ ಎಂ ಕಾರ್ಯಕ್ರಮ ನಿರೂಪಿಸಿದರು.

ಬಹುಮಾನ ವಿಜೇತರ ಪಟ್ಟಿ:
ದೇಶ ಭಕ್ತಿಗೀತೆ ಸಮೂಹ ಗಾಯನ ಪ್ರಥಮ: ಅತ್ರೇಯ ಭಟ್ ಮತ್ತು ಬಳಗ (ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಪುತ್ತೂರು), ದ್ವಿತೀಯ: ರಚನಾ ಮತ್ತು ಬಳಗ (ಪ್ರಗತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕಾಣಿಯೂರು) , ತೃತೀಯ: ಹರಿಣಿ ಮತ್ತು ಬಳಗ (ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢ ಶಾಲೆ ತೆಂಕಿಲ).

ಭಾಷಣ ಸ್ಪರ್ಧೆ: ಪ್ರಥಮ : ವಿಖ್ಯಾತಿ ಬೆಜ್ಜಂಗಳ (ಸುದಾನ ವಸತಿಯುತ ಶಾಲೆ), ದ್ವಿತೀಯ : ಶ್ರಾವ್ಯ ಕೆ ಎಚ್ (ಪ್ರಗತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕಾಣಿಯೂರು), ತೃತೀಯ: ಧಾತ್ರಿ ರೈ (ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢ ಶಾಲೆ ತೆಂಕಿಲ).

ಚಿತ್ರಕಲೆ: ಪ್ರಥಮ: ಅಗಮ್ಯ (ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢ ಶಾಲೆ ತೆಂಕಿಲ) ದ್ವಿತೀಯ : ಸಹನ್ ಜೆ ಕೆ (ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ನರಿಮೊಗರು), ತೃತೀಯ : ಆರ್ಯ ಎಂ (ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಪುತ್ತೂರು).

ಪ್ರಬಂಧ : ಪ್ರಥಮ: ಅವನಿ ಬೆಳ್ಳಾರೆ (ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢ ಶಾಲೆ ತೆಂಕಿಲ) ದ್ವಿತೀಯ : ಉತ್ತಮ್ ಜಿ (ಪ್ರಗತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕಾಣಿಯೂರು), ತೃತೀಯ : ಫಲಾಕ್ ಶೇಕ್ ( ಬೆಥನಿ ಆಂಗ್ಲ ಮಾಧ್ಯಮ ಶಾಲೆ)

ರಸಪ್ರಶ್ನೆ : ಪ್ರಥಮ : ರಕ್ಷಿತ್ ಡಿ ಕೆ ಮತ್ತು ಸಾತ್ವಿಕ್ ರೈ (ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ನರಿಮೊಗರು, ದ್ವಿತೀಯ : ಶ್ರೀಜಿತ್ ಸಿ ಕೆ ಮತ್ತು ಪ್ರಣವ್ ಕೃಷ್ಣ (ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ತೆಂಕಿಲ) , ತೃತೀಯ : ತೀಕ್ಷ್ಣವಿ ಮತ್ತು ಪ್ರಾಪ್ತಿ (ಮಾರ್ ಇವೇನಿಯಸ್ ಆಂಗ್ಲ ಮಾಧ್ಯಮ ಶಾಲೆ ಕುಂತೂರು)

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

46 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

60 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago