ಉಡುಪಿ: ಅಲೆವೂರು ಶಾಂತಿನಿಕೇತನ ಶಾಲೆಯ ವಾರ್ಷಿಕೋತ್ಸವ

ಉಡುಪಿ: ಅಲೆವೂರು ಗ್ರೂಪ್ ಫಾರ್ ಎಜ್ಯುಕೇಶನ್ ವತಿಯಿಂದ ನೀಡಲಾಗುವ 2022ನೇ ಸಾಲಿನ ಪ್ರತಿಷ್ಠಿತ ಅಲೆವೂರು ಗ್ರೂಪ್ ಅವಾರ್ಡ್ ಅನ್ನು ಉಡುಪಿ ಡಾ.ಟಿ.ಎಂ.ಎ. ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಅವರಿಗೆ ಪ್ರದಾನ ಮಾಡಲಾಯಿತು.

ಅಲೆವೂರು ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಶಶಿಕಿರಣ್ ಅವರು, ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಸಾರ್ವಜನಿಕರ ಸಹಕಾರದೊಂದಿಗೆ ವೈದ್ಯಕೀಯ ಕ್ಷೇತ್ರ ಸಮರ್ಥವಾಗಿ ಎದುರಿಸಿದೆ. ಇದೀಗ ಮತ್ತೆ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಈ ಬಗ್ಗೆ ಆತಂಕ ಬೇಡ. ಭಾರತದಲ್ಲಿ ಶೇ. 90ಲಸಿಕೆ ಪೂರ್ಣವಾಗಿದ್ದು, ಮುನ್ನಚ್ಚೆರಿಕಾ ಕ್ರಮ ತೆಗೆದುಕೊಳ್ಳುವುದು ಅಗತ್ಯ ಎಂದರು.

ಹಿರಿಯ ಪತ್ರಕರ್ತ ಯು.ಕೆ. ಕುಮಾರನಾಥ್ ಹಾಗೂ ಲಯನ್ಸ್ 317 ಸಿ ಜಿಲ್ಲಾ ಮಾಜಿ ಗವರ್ನರ್ ಎನ್.ಎಂ. ಹೆಗ್ಡೆ ಮಾತನಾಡಿದರು. ಅಲೆವೂರು ಗ್ರೂಪ್ ಫಾರ್ ಎಜುಕೇಶನ್ ಅಧ್ಯಕ್ಷ ಎ. ಗಣಪತಿ ಕಿಣಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಅಲೆವೂರು ದಿನೇಶ್ ಕಿಣಿ ಸ್ವಾಗತಿಸಿದರು. ಕೋಶಾಧಿಕಾರಿ ಹರೀಶ್ ಕಿಣಿ ಸನ್ಮಾನಿತರ ಪರಿಚಯ ಮಾಡಿದರು.

ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲೆ ರೂಪಾ ಡಿ. ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Gayathri SG

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

16 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

34 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

2 hours ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago