ಉಡುಪಿ: ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ ವಿಶೇಷೋಪನ್ಯಾಸ ಮಾಲೆ’ ಕಾರ್ಯಕ್ರಮ

ಉಡುಪಿ: ” ಬೋನಿನಲ್ಲಿ ಇರುವ ಇಲಿಗಳ ರೀತಿ ಮನುಷ್ಯ ಜಾತಿ, ಧರ್ಮದ ಬೋನಿನಲ್ಲಿ ವಾಸಿಸುತ್ತಿದ್ದಾನೆ ” ಎನ್ನುವ ಕುವೆಂಪು, ಧರ್ಮದ ಹೆಸರಿನಲ್ಲಿ ನಡೆಯುವ ಮೌಢ್ಯವನ್ನು ವಿರೋಧಿಸಿ ಸಾಹಿತ್ಯದ ಮೂಲಕ ತಮ್ಮ ಧ್ವನಿಯನ್ನು ಎತ್ತಿದವರಲ್ಲಿ ಪ್ರಮುಖರು ಎಂದು ಸಂಪನ್ಮೂಲ ವ್ಯಕ್ತಿ ಡಾ. ಸುಧಾಕರ ದೇವಾಡಿಗ ಬಿ ನುಡಿದರು.

ಎಂ.ಜಿ.ಎಂ‌. ಕಾಲೇಜು ಉಡುಪಿಯ ಗೀತಾಂಜಲಿ ಸಭಾಂಗಣದಲ್ಲಿ ಎಸ್‌ಡಿಎಂ ಕಾಲೇಜು ಉಜಿರೆಯ ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕುಪ್ಪಳಿ ಸಹಯೋಗದೊಂದಿಗೆ ಜರುಗಿದ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ ವಿಶೇಷೋಪನ್ಯಾಸ ಮಾಲೆ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಮೌಢ್ಯವನ್ನು ಪ್ರಶ್ನಿಸುವ ಮನೋಧರ್ಮವು ಯುವಜನರಲ್ಲಿ ಬೆಳೆಯಬೇಕಿದೆ. ಮೂಢವನ್ನು ಮೀರಿ ಅದರ ಜಾಗದಲ್ಲಿ ವೈಜ್ಞಾನಿಕ ಚಿಂತನೆಗಳು ಮಾಡಬೇಕು.
ಕುವೆಂಪು ಸಾಹಿತ್ಯ ಓದುಗರಲ್ಲಿ ಮಾನವೀಯತೆಯನ್ನು ಬಿತ್ತುತ್ತದೆ, ಅವರ ವಿಚಾರಧಾರೆಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಪ್ರಾಂಶುಪಾಲ ಡಾ. ದೇವಿದಾಸ ಎಸ್. ನಾಯ್ಕ್ ಮಾತನಾಡಿ ” ಕುವೆಂಪು ಒಬ್ಬ ವಿಶಿಷ್ಟ ವ್ಯಕ್ತಿ. ಅವರ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಆ ತತ್ವಗಳು ಸಾರ್ವತ್ರಿಕವಾಗಿದ್ದು, ಇಂದಿನ ಯುವ ಜನತೆಗೆ ಅದರ ಅವಶ್ಯಕತೆ ಇದೆ ” ಎಂದರು.

ಕುವೆಂಪು ಆದರ್ಶ ಮತ್ತು ವ್ಯಕ್ತಿತ್ವವನ್ನು ಮುಂದಿನ ತಲೆಮಾರಿಗೆ ರವಾನಿಸುವ ಉದ್ದೇಶದಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯ ಹಲವಾರು ಕಾಲೇಜುಗಳಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಯುವ ತಲೆಮಾರಿಗೆ ಕುವೆಂಪು ವಿಚಾರಧಾರೆಗಳನ್ನು ತಲುಪಿಸುವ ದೃಷ್ಟಿಯಿಂದ ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮ ಸಂಯೋಜಕ ಮತ್ತು ಎಸ್‌ಡಿಎಂ ಕಾಲೇಜು ಉಜಿರೆಯ ಕನ್ನಡ ಪ್ರಾಧ್ಯಾಪಕರಾದ ಡಾ.ರಾಜಶೇಖರ ಹಳೆಮನೆ ತಿಳಿಸಿದರು.

ಕಾರ್ಯಕ್ರಮವನ್ನು ಪ್ರಾಧ್ಯಾಪಕ ರಾಮಾಂಜಿ ನಿರೂಪಿಸಿದರು. ವಿದ್ಯಾರ್ಥಿನಿ ಸ್ವರ್ಣ ಸ್ವಾಗತಿಸಿ, ರಕ್ಷಿತಾ ಶೆಟ್ಟಿ ವಂದನಾರ್ಪಣೆ ಮಾಡಿದರು. ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

4 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

4 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

4 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

5 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

5 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

6 hours ago