ಕ್ಯಾಂಪಸ್

ಉಜಿರೆ: ಕಾಲೇಜಿನಲ್ಲಿ ಆಯುಷ್ಮಾನ್ ಕಾರ್ಡ್ ನೋಂದಾವಣೆ

ಉಜಿರೆ: ಶ್ರೀ ಧ. ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಗ್ರಾಮ ಪಂಚಾಯತ್ ಉಜಿರೆ ಮತ್ತು ಎಸ್.ಕೆ. ಡಿ.ಆರ್.ಡಿ.ಪಿ ಧರ್ಮಸ್ಥಳ ಇದರ ಸಹಯೋಗದಲ್ಲಿ ಕೇಂದ್ರ ಸರ್ಕಾರ ಕೊಡ ಮಾಡುತ್ತಿರುವ ಆಯುಷ್ಮಾನ್ ಭಾರತ್ ಯೋಜನೆಯ ಆರೋಗ್ಯ ಕಾರ್ಡ್ (ಆಭಾ ಕಾರ್ಡ್) ನೋಂದಾವಣೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಆಯೋಜಿಸಿತ್ತು.

ಅತಿಥಿಯಾಗಿ ಆಗಮಿಸಿದ್ದ ಪ್ರತಿನಿಧಿ ಶ್ರುತಿ ಗುಡಿಗಾರ್ ಇವರು ವಿದ್ಯಾರ್ಥಿಗಳಿಗೆ ಆ ಯೋಜನೆಯ ಉಪಯೋಗಗಳನ್ನು ತಿಳಿಸಿ , ನೋಂದಾವಣೆಗೆ ಚಾಲನೆ ಕೊಟ್ಟರು . 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಕೂಡ ಈ ಶಿಬಿರದ ಪ್ರಯೋಜನ ಪಡೆದುಕೊಂಡರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಧಿಕಾರಿಗಳಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್ ಹಾಗೂ ದೀಪಾ ಆರ್. ಪಿ ಉಪಸ್ಥಿತರಿದ್ದರು. ಸ್ವಯಂಸೇವಕಿ ಅಂಜನಾ ಕೆ ರಾವ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Gayathri SG

Recent Posts

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

12 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

40 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

48 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

49 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

58 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

1 hour ago