ಉಜಿರೆ: ಶ್ರೀ. ಧ. ಮ. ಕಾಲೇಜಿನಲ್ಲಿ ಐಟಿ ಕ್ಲಬ್ ಉದ್ಘಾಟನೆ

ಉಜಿರೆ: “ತಂತ್ರಜ್ಞಾನವು ಇಂದು ಮಾನವನ ಬದುಕಿನಲ್ಲಿ ಹಾಸುಹೊಕ್ಕಾಗಿದೆ ಮತ್ತು ಕಂಪ್ಯೂಟರ್ ಬಗ್ಗೆ ಜ್ಞಾನವಿರುವುದು ಈ ಕಾಲಘಟ್ಟದಲ್ಲಿ ಅತ್ಯಂತ ಮುಖ್ಯವಾಗಿದೆ. ಆದರೆ, ಅವುಗಳ ಬಗ್ಗೆ ಜಾಗ್ರತೆ ಇರಬೇಕು” ಎಂದು ಶ್ರೀ ಧ ಮ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಟಿ. ಎನ್ . ಕೇಶವ ನುಡಿದರು.

ಸೆಪ್ಟೆಂಬರ್ 11 ರಂದು ಶ್ರೀ ಧ ಮ ಕಾಲೇಜು, ಉಜಿರೆ ಇಲ್ಲಿಯ ಸಮ್ಯಗ್ದರ್ಶನ ಸಭಾಂಗಣದಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಐಟಿ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ” 40 ವರ್ಷಗಳ ಹಿಂದೆ ಕಾಲೇಜಿಗೆ ಮೊದಲ ಕಂಪ್ಯೂಟರ್ ಬಂದಾಗ ಅದು ಕೇವಲ 40 ಎಮ್ ಬಿ ಮೆಮೊರಿ ಮಾತ್ರ ಇತ್ತು. ಆದರೆ ಇಂದು ಡೇಟಾ ಸ್ಟೋರೇಜ್ ಅನ್ನುವಂಥದ್ದು ಬಹಳ ಮುಂದುವರೆದಿದೆ.ಇಂದು ನೀವು ತಂತ್ರಜ್ಞಾನ ವಿಷಯದಲ್ಲಿ ಎಷ್ಟು ಕಲಿತರು ಕಮ್ಮಿ. ಏಕೆಂದರೆ ದಿನ ಬೆಳಗಾಗುವುದರ ಒಳಗೆ ತಂತ್ರಜ್ಞಾನದಲ್ಲಿ ಹೊಸತನ ಬಂದಿರುತ್ತದೆ ” ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಭಾಗದ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು ಜೊತೆಗೆ ವಿದ್ಯಾರ್ಥಿ ಅನಂತ್ ರಚಿಸಿದ ವರ್ಣಚಿತ್ರವನ್ನು ವಿಭಾಗಕ್ಕೆ ಹಸ್ತಾಂತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ್ ಹೆಗ್ಗಡೆ ಐಟಿ ಕ್ಲಬ್ ನ ವಿದ್ಯಾರ್ಥಿ ಸಂಯೋಜಕರಿಗೆ ಗುರುತಿನ ಚೀಟಿ ಮತ್ತು ಹೂವನ್ನು ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಂಪ್ಯೂಟರ್ ಸೈನ್ಸ್ ಮುಖ್ಯಸ್ಥ ಶೈಲೇಶ್ ಕುಮಾರ್, ಐಟಿ ಕ್ಲಬ್ ನ ಉಪನ್ಯಾಸಕಿ ಸಂಯೋಜಕರಾದ ಅಕ್ಷತಾ.ಕೆ, ದಿವ್ಯಾ ಯಾದವ್, ವಿದ್ಯಾರ್ಥಿ ಪ್ರತಿನಿಧಿಗಳಾದ ಮನೀಷ್ ಕುಮಾರ್, ಬಿ. ಸತೀಶ್ ಮತ್ತು ಸಮಾರಂಭದಲ್ಲಿ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಭವ್ಯ.ಎನ್ . ಯು ಸ್ವಾಗತಿಸಿ, ವಿಭಾಗದ ಮುಖ್ಯಸ್ಥ ಶೈಲೇಶ್ ಕುಮಾರ್ ಅತಿಥಿಯನ್ನು ಪರಿಚಯಿಸಿದರು, ವಿದ್ಯಾರ್ಥಿನಿ ಚಿನ್ಮಯೀ ವಂದಿಸಿದರು. ಕುಮಾರಿ ನಾಗಶ್ರೀ ಶೆಟ್ಟಿ ನಿರೂಪಿಸಿದರು. ಕಾವ್ಯ ಮತ್ತು ಬಳಗ ಪ್ರಾರ್ಥಿಸಿದರು.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

5 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

5 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

6 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

6 hours ago