ಕ್ಯಾಂಪಸ್

ಉಜಿರೆ: ‘ಜ್ಞಾನದ ಪ್ರಾಯೋಗಿಕ ಅನ್ವಯದಿಂದ ಕಲಿಕೆ ಸಾರ್ಥಕ’

ಉಜಿರೆ: ಜ್ಞಾನವು ಪ್ರಾಯೋಗಿಕವಾಗಿ ಅನ್ವಯವಾದಾಗ ಮಾತ್ರ ಕಲಿಕೆಯ ಸಾರ್ಥಕತೆ ಸಾಧ್ಯ ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ಎನ್ ಉದಯಚಂದ್ರ ನುಡಿದರು.

ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ಮತ್ತು ಸಂಶೋಧನಾ ವಿಭಾಗವು ಸೋಮವಾರ ಆಯೋಜಿಸಿದ್ದ ‘ಎಲೆಕ್ಟೊ ಹಬ್’ ಕ್ಲಬ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಯೋಗಿಕ ಕಲಿಕೆ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವವನ್ನು ಬೆಳೆಸುತ್ತದೆ. ಇಂತಹ ಕಲಿಕೆಯಿಂದ ವಿದ್ಯಾರ್ಥಿಗಳ
ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ಜೊತೆಗೆ ಇದು ವಿದ್ಯಾರ್ಥಿಗಳಲ್ಲಿ ತಾಳ್ಮೆಯ ಮನೋಭಾವವನ್ನು ಅಭಿವೃದ್ಧಿಪಡಿಸುತ್ತದೆ ಎಂದು ಹೇಳಿದರು.

ಈ ವೇಳೆ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ್ದ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ ಕೊಟ್ಟಾಯಮ್‌ನ ತಂತ್ರಜ್ಞಾನ ಮತ್ತು ಅನ್ವಯಿಕ ವಿಜ್ಞಾನ ವಿಭಾಗದ ನಿರ್ದೇಶಕರಾದ ಡಾ.ಕೆ.ಶ್ರೀಕೃಷ್ಣಕುಮಾರ್ ಮಾತನಾಡಿದರು.

ಯುವಜನತೆಗೆ ಅಸಾಧ್ಯವಾದುದನ್ನು ಸಾಧಿಸುವ ಅಂತಃಸತ್ವ ಇರುತ್ತದೆ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಈ ಸಂದರ್ಭದಲ್ಲಿ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ ಇ- ಮ್ಯಾಗಝಿನ್ ಇದೇ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳ ಪ್ರಾಯೋಗಿಕ ಕೌಶಲ್ಯಗಳ ಅಭಿವೃದ್ಧಿಯ ಉದ್ದೇಶದಿಂದ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿಗಳಿಗೋಸ್ಕರ ವಿದ್ಯಾರ್ಥಿಗಳಿಂದಲೇ ‘ಎಲೆಕ್ಟೊ ಹಬ್’ ಹುಟ್ಟಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಪದವಿ ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಪ್ರೊ. ಶಶಿಶೇಖರ ಎನ್ ಕಾಕತ್ಕರ್, ಸ್ನಾತಕೋತ್ತರ ಕೇಂದ್ರದ ಭೌತಶಾಸ್ತç ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸಹನಾ ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅನುಪಮಾ ನಿರೂಪಿಸಿದರು. ಪ್ರೀತಿ ಪಾಟೀಲ್ ಸ್ವಾಗತಿಸಿದರೆ, ಮಾನಸಾ ವಂದಿಸಿದರು.

Sneha Gowda

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

9 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

27 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

47 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago