ಉಜಿರೆ: ಎಸ್.ಡಿ.ಎಂನ ಮನಶಾಸ್ತ್ರ ವಿಭಾಗದಲ್ಲಿ ಬಿತ್ತಿಚಿತ್ರ ಪ್ರದರ್ಶನ

ಉಜಿರೆ: ಪ್ರತಿಯೊಬ್ಬನಿಗೂ ಮನಶ್ಶಾಸ್ತ್ರ ತುಂಬಾ ಅವಶ್ಯಕವಾಗಿದೆ ಮಾನಸಿಕ ಆರೋಗ್ಯ ಕೂಡ ಇಂದಿನ ದಿನಗಳಲ್ಲಿ ಅತೀ ಮುಖ್ಯ. ಇಂತಹ ಸಂಧರ್ಭಗಳಲ್ಲಿ ಮಾನಸಿಕ ಸುವ್ಯವಸ್ಥೆಯ ಬಗ್ಗೆ ಹಾಗೂ ಮಾನಸಿಕ ವೈಕಲ್ಯಗಳ ಬಗ್ಗೆ ಜಾಗ್ರತಿ ಮೂಡಿಸುವ ಬಿತ್ತಿ ಚಿತ್ರಗಳು ಒಂದು ಒಳ್ಳೆಯ ಕೆಲಸವಾಗಿದೆ ಎಂದು ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದ ಕುಮಾರಿ ಶ್ಲಾಘಿಸಿದರು.

ಉಜಿರೆಯ ಶ್ರೀ ಧ.ಮ ಕಾಲೇಜಿನ ಮನಶ್ಶಾಸ್ತ್ರ ವಿಭಾಗವು ವಿಶ್ವ ಅಂಗವೈಕಲ್ಯ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಬಿತ್ತಿ ಚಿತ್ರ ಪ್ರದರ್ಶನದಲ್ಲಿ ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳು ಕೈ ಇಂದಲೇ ಮಾಡಿದ ಒಟ್ಟು 40 ಪೋಸ್ಟರ್’ಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಎಸ್.ಡಿ.ಎಂ ಬಿ.ಎಡ್ , ಪ್ರೌಢಶಾಲೆ , ಡಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶನವನ್ನು ವೀಕ್ಷಿಸಿದರು. ಹೆಚ್ಚಿನ ಪ್ರಮಾಣದ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಜೈನ್ , ಪ್ರಾದ್ಯಾಪಕ ಡಾ. ಸುಧೀರ್ ಕೆ.ವಿ, ಆತ್ಮಿಕಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಹರ್ಷಿತಾ ಶೆನೈ ನಿರೂಪಿಸಿದರು. ಜ್ಯೊತಿಕ ಪಿ.ರೈ ಸ್ವಾಗತಿಸಿದರು ಮತ್ತು ತೇಜಸ್ವಿನಿ ಕೋಟ್ಯಾನ್ ವಂದಿಸಿದರು.

Gayathri SG

Recent Posts

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

12 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

20 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

34 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

34 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

59 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

1 hour ago