News Karnataka Kannada
Friday, May 03 2024
ಮಂಗಳೂರು

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಚಯ’ ವಿಶೇಷ ಕಾರ್ಯಕ್ರಮ

Ujire S.D.M. 'Sanchaya' special programme in college
Photo Credit : News Kannada

ಉಜಿರೆ: ಶ್ರೇಷ್ಠ ಹವ್ಯಾಸಗಳು ಮಾನವನ ಅಭಿವೃದ್ಧಿಗೆ ಪೂರಕ ಎಂದು ರುಡ್ ಸೆಟಿ ಸಂಸ್ಥೆಯ ತರಬೇತುದಾರೆ ಅನಸೂಯಾ ಅಭಿಪ್ರಾಯಪಟ್ಟರು.

ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇತ್ತೀಚೆಗೆ ಹಾಬಿ ಸರ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ‘ಸಂಚಯ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಹವ್ಯಾಸಗಳಲ್ಲಿ ತೊಡಗುವುದರಿಂದ ಸಂತೋಷ ಲಭಿಸುತ್ತದೆ. ಮನುಷ್ಯನ ಜೀವನವನ್ನು ಹಸನುಗೊಳಿಸುವ ಶಕ್ತಿ ಉತ್ತಮ ಹವ್ಯಾಸಗಳಿಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅವರು, ವಿದ್ಯಾರ್ಥಿಗಳು ಕನಿಷ್ಠ ಮೂರು ಉತ್ತಮ ಹವ್ಯಾಸಗಳನ್ನು ಹೊಂದಿರಬೇಕು ಎಂದರು. ಹಲವು ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಹಾಬಿ ಸರ್ಕಲ್ ಸಂಯೋಜಕಿ ಅಭಿಜ್ಞಾ ಉಪಾಧ್ಯಾಯ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕಿ ಅನ್ನಪೂರ್ಣ ವಂದಿಸಿದರು. ಮಾನಸ ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಂಭ
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್.ಡಿ.ಎಂ. ಕಾಲೇಜಿನ ಕಲಾ ನಿಕಾಯದ ಡೀನ್ ಡಾ. ಶಲೀಫ್ ಕುಮಾರಿ ಅಭ್ಯಾಗತರಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣೆಯ ಮಾತುಗಳನ್ನಾಡಿದರು.

ಹಾಬಿ ಸರ್ಕಲ್ ಸಂಯೋಜಕಿ ಅಭಿಜ್ಞಾ ಉಪಾಧ್ಯಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಬಗ್ಗೆ ಮನೋಜ್ ಅಭಿಪ್ರಾಯ ಹಂಚಿಕೊಂಡರು. ಅಭಿರಾಮ್ ಭಾಗವತ್ ಸ್ವಾಗತಿಸಿ, ಸೃಷ್ಟಿ ವಂದಿಸಿದರು. ನಿಸರ್ಗ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು