News Karnataka Kannada
Friday, May 10 2024
ಮಂಗಳೂರು

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Ujire S.D.M. State-level one-day workshop at the college
Photo Credit : News Kannada

ಉಜಿರೆ, ಜೂ.3: ಸಂಶೋಧನೆಯೆಂಬುವುದು ವೈಜ್ಞಾನಿಕವಾಗಿ, ಸಾಮಾಜಿಕಅಭಿವೃದ್ಧಿ ಮತ್ತು ಸುಸ್ಥಿರತೆಗೆ ಪೂರಕವಾಗಿ ಇರುವುದು ಅಗತ್ಯ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎ.ಜಯಕುಮಾರ್ ಶೆಟ್ಟಿಹೇಳಿದರು.

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ‘ಸಂಶೋಧನಾ ವಿನ್ಯಾಸ: ಲೇಖನ ಬರವಣಿಗೆ ಮತ್ತು ಪ್ರಕಟಣೆ- ಭವಿಷ್ಯದ ಹಾದಿ’ ಎಂಬ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಶೋಧನೆಯೆಂಬುದು ಉನ್ನತ ಶಿಕ್ಷಣ ಹಂತದ ಒಂದು ಪ್ರಮುಖ ಅಂಶ. ಇದು ಒಂದು ಹೊಸ ವಿಷಯದ ಉಗಮಕ್ಕೆ ಕಾರಣವಾಗುತ್ತದೆ. ಕಲಿಕೆಗೆ ಕೊನೆಯೆಂಬುದು ಇಲ್ಲ. ಅದು ನಿರಂತರ ಪ್ರಕ್ರಿಯೆ. ಒಬ್ಬ ವ್ಯಕ್ತಿಗೆ ಯಾವುದೇ ಕಟ್ಟುಪಾಡುಗಳಿಲ್ಲದೆ ಅಭಿಪ್ರಾಯಗಳನ್ನು ಮತ್ತು ಸತ್ಯಗಳನ್ನು ವ್ಯಕ್ತಪಡಿಸಲು ಸಂಶೋಧನೆಯು ಅನುವು ಮಾಡಿಕೊಡುತ್ತದೆ. ಸಮಾಜದಲ್ಲಿರುವ ಹಲವಾರು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಶೋಧನೆಗಳ ಪಾತ್ರ ದೊಡ್ಡದು ಎಂದು ಅವರು ತಿಳಿಸಿದರು.

ಪ್ರತಿಯೊಬ್ಬರೂ ಪ್ರಶ್ನೆ ಮಾಡುವಗುಣ ಹೊಂದಿರಬೇಕು. ಮಾನವ ವಿಕಾಸ ಹೊಂದಿದಂತೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡನು. ಒಂದು ಉತ್ತಮ ಸಂಶೋಧನಾ ಮನಃಸ್ಥಿತಿ ಉಂಟಾಗಲು ಪ್ರಶ್ನೆಯ ಪಾತ್ರವೂ ಬಹಳಷ್ಟಿದೆ. ಪ್ರಶ್ನೆಗಳು ಹೊಸ ಚಿಂತನೆಗೆ ಪೂರಕವಾಗಿ, ಅಗೋಚರವಾದ ಹೊಸ ವಿಷಯಗಳ ಹುಡುಕುವಿಗೆ ಹಾದಿಯಾಗಿ, ಅಂತಿಮವಾಗಿ ಒಂದು ಉತ್ತಮ ಸಂಶೋಧನಾ ಪ್ರಬಂಧ ಮೂಡಿ ಬರಲು ಸಹಾಯಕವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ಅನಿತಾ ರವಿಶಂಕರ್ ಮಾತನಾಡಿದರು. ಸಂಶೋಧನೆಗಳಲ್ಲಿ ಸಮಸ್ಯೆಗಳನ್ನು ವಿಮರ್ಶಾತ್ಮಕವಾಗಿ ನೋಡಬೇಕು. ಒಂದು ಉತ್ತಮವಾದ ಸಂಶೋಧನೆ ಮೂಡಿ ಬರಲು ಓದುವಿಕೆಯ ಪಾತ್ರ ಬಹಳ ಮಹತ್ತರ. ಸಂಶೋಧನೆಗೆ ನಿರಂತರ ಪ್ರಕ್ರಿಯೆ ಮತ್ತು ಪ್ರಾಮಾಣಿಕ ಬದ್ಧತೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

“ಇಂದಿನ ಹೆಚ್ಚಿನ ವಿದ್ಯಾರ್ಥಿಗಳು ಕೈಗೊಳ್ಳುವ ಸಂಶೋಧನೆಗಳಲ್ಲಿ ಗುಣಮಟ್ಟದ ಪ್ರಮಾಣ ಕಡಿಮೆಯಾಗುತ್ತಿದೆ. ಇದರ ಜೊತೆಗೆ ಹೆಚ್ಚಿನ ಸಂಶೋಧನಾ ಪ್ರಬಂಧಗಳಲ್ಲಿ ಕೃತಿಚೌರ್ಯದ ಪ್ರಮಾಣ ಹೆಚ್ಚಾಗಿ ವ್ಯಾಪಿಸುತ್ತಿದೆ. ಇಂದುಹೆಚ್ಚಿನ ವಿದ್ಯಾಸಂಸ್ಥೆಗಳು ಸಂಶೋಧನೆಗೆ ಕಡಿಮೆ ಒತ್ತು ನೀಡುತ್ತಿದೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ನಿಜಕ್ಕೂ ಕಳವಳಕಾರಿ ಸಂಗತಿ” ಎಂದರು.

ಕಾರ್ಯಾಗಾರದ ಅಧ್ಯಕ್ಷತೆವಹಿಸಿದ್ದ ಉಜಿರೆ ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ, “ವಿದ್ಯಾರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ನವೀಕೃತವಾಗಿರಲು ಸಂಶೋಧನೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಅಗತ್ಯವಿದೆ. ಸಂಶೋಧನೆಗೆ ಆಯ್ಕೆ ಮಾಡಿಕೊಳ್ಳುವ ವಿಷಯಗಳು ಸಾಮಾಜಿಕ ಸುಸ್ಥಿರತೆ ಮತ್ತುಅಭಿವೃದ್ಧಿಗೆ ಪೂರಕವಾಗಿದ್ದಾಗ ಅದು ಉತ್ತಮ ಸಂಶೋಧನಾ ಕೃತಿಯಾಗಿ ಮೂಡಿಬರಲು ಸಾಧ್ಯವಾಗುತ್ತದೆ” ಎಂದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಇಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್‌ಕುಮಾರ್ ಟಿ., ಎಸ್.ಡಿ.ಎಂ. ಸ್ನಾತಕೋತ್ತರಕೇಂದ್ರದಡೀನ್‌ಡಾ.ವಿಶ್ವನಾಥ್ ಪಿ.ಉಪಸ್ಥಿತರಿದ್ದರು.

ಎಸ್.ಡಿ.ಎಂ.ಕಾಲೇಜಿನ ಸಂಶೋಧನೆ ಮತ್ತುಅಭಿವೃದ್ಧಿ ಕೋಶದ ನಿರ್ದೇಶಕಿ, ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸೌಮ್ಯ ಬಿ.ಪಿ.ಸ್ವಾಗತಿಸಿದರು. ಸಂಚಾಲಕ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಗಣರಾಜ್‌ಕೆ. ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ನೆಫಿಸತ್ ಪಿ.ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು