News Karnataka Kannada
Monday, May 06 2024
ಕ್ಯಾಂಪಸ್

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಧುಶ್ರೀಗೆ ವರ್ಷದ ಯುವ ವಿಜ್ಞಾನಿ ಪ್ರಶಸ್ತಿ

Ujire: SDM English medium school's Madhushree wins Young Scientist of the Year award
Photo Credit : News Kannada

ಉಜಿರೆ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಆಶ್ರಯದಲ್ಲಿ ಕಲಬುರ್ಗಿಯ ಖಣದಾಳದಲ್ಲಿ ನಡೆದ 30ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಉಜಿರೆಯ ಶ್ರೀಧ.ಮಂ. ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮಂಡಿಸಿದ ‘ಅಡಕೆ ಸಿಪ್ಪೆಯಿಂದ ಪೇಪರ್ ತಯಾರಿ’ ಎಂಬ ಕಾರ್ಯಯೋಜನೆಗೆ ಗ್ರಾಮೀಣ ವಿಭಾಗದ ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ದೊರೆತಿದ್ದು ಅವರು ವರ್ಷದ ಯುವ ವಿಜ್ಞಾನಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ 210ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಇದರಲ್ಲಿ ಆರು ವಿದ್ಯಾರ್ಥಿಗಳು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದು ಮಧುಶ್ರೀ ಪ್ರಥಮ ಸ್ಥಾನ ಪಡೆದರು. ರಾಷ್ಟ್ರಮಟ್ಟದ ಸಮಾವೇಶ ಜ. 28ರಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯಲಿದೆ.

ಕಾರ್ಯಯೋಜನೆಯಲ್ಲಿ ಇದೇ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ವಿಜ್ಞಾನ ಶಿಕ್ಷಕಿ ಶೋಭಾ ಅವರು ಕಾರ್ಯಯೋಜನೆಗೆ ಮಾರ್ಗದರ್ಶನ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು