ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ, ಜು.26: ದೇಶದ ಆಂತರಿಕ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರಯತ್ನಿಸುವ ಮೂಲಕ ದೇಶವಾಸಿಗಳು ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಭಿಪ್ರಾಯಪಟ್ಟರು.

ಕಾಲೇಜಿನಲ್ಲಿ ಇಂದು (ಜು.26) ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಹಾಗೂ ಎನ್.ಸಿ.ಸಿ. ಘಟಕಗಳ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಗಿಲ್ ವಿಜಯ ದಿವಸ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀರಾಮಚಂದ್ರನ ಮಾತಿನಂತೆ ತಾಯಿ ಮತ್ತು ಮಾತೃಭೂಮಿ ಸ್ವರ್ಗಕ್ಕಿಂತಲೂ ಮಿಗಿಲು. ಮಾತೃಭೂಮಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬಹುದು. ಆದರೆ ದೇಶದ ಗಡಿಯನ್ನು ಸೈನಿಕರು ರಕ್ಷಿಸುತ್ತಿದ್ದು, ಆಂತರಿಕ ರಕ್ಷಣೆಯನ್ನು ದೇಶವಾಸಿಗಳು ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

“ನಮ್ಮ ಮಾತೃಭೂಮಿ, ದೇಶದ ಬಗ್ಗೆ ನಮ್ಮಲ್ಲಿ ಅಭಿಮಾನ, ಹೆಮ್ಮೆ ಇರಬೇಕು. ತೀವ್ರ ಪ್ರತಿಕೂಲ ಹವಾಮಾನ ಇರುವ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಮ್ಮ ಯೋಧರ ತ್ಯಾಗ, ಬಲಿದಾನವನ್ನು ಊಹಿಸಲೂ ಅಸಾಧ್ಯ. ಅಂತಹ ಸೈನಿಕರಿಗೆ ಹಾಗೂ ಅವರ ಕುಟುಂಬಕ್ಕೆ ನೈತಿಕ ಬೆಂಬಲ ನೀಡುವ ಅಗತ್ಯವಿದೆ” ಎಂದು ಅವರು ಹೇಳಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಂದಿನ ವರ್ಷ ಕಾರ್ಗಿಲ್ ವಿಜಯ ದಿವಸಕ್ಕೆ ಇಪ್ಪತ್ತೈದು ವರ್ಷಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಇಪ್ಪತ್ತೈದು ಮಹತ್ವಪೂರ್ಣ ಕಾರ್ಯಕ್ರಮಗಳನ್ನು ಪ್ರಸಕ್ತ ವರ್ಷದಿಂದ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಕಾರ್ಗಿಲ್ ವಿಜಯ ದಿವಸ ಕುರಿತಂತೆ ಎನ್.ಸಿ.ಸಿ. ಘಟಕದ ವತಿಯಿಂದ ರಚಿಸಲಾದ ಭಿತ್ತಿಪತ್ರಿಕೆಯನ್ನು ಪ್ರಾಂಶುಪಾಲರು ಅನಾವರಣಗೊಳಿಸಿದರು. ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಕಾಲೇಜಿನ ಕುಲಸಚಿವ (ಆಡಳಿತ) ಪ್ರೊ. ಶಶಿಶೇಖರ ಎನ್. ಕಾಕತ್ಕರ್, ಕಲಾ ನಿಕಾಯದ ಡೀನ್ ಡಾ. ಶಲೀಪ್ ಕುಮಾರಿ, ಎನ್.ಸಿ.ಸಿ. ಅಧಿಕಾರಿಗಳಾದ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ ಭಟ್, ಲೆಫ್ಟಿನೆಂಟ್ ಭಾನುಪ್ರಕಾಶ್ ಬಿ.ಇ. ಹಾಗೂ ಲೆಫ್ಟಿನೆಂಟ್ ಶುಭಾರಾಣಿ ಪಿ.ಎಸ್., ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರೊ. ದೀಪಾ ಆರ್.ಪಿ., ಎನ್.ಸಿ.ಸಿ. ಕೆಡೆಟ್ ಗಳು ಹಾಗೂ ಎನ್ನೆಸ್ಸೆಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಿಂಚನಾ ಕಾರ್ಯಕ್ರಮ ನಿರ್ವಹಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

29 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

46 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago