ಉಜಿರೆ: ಶ್ರದ್ಧೆ, ಛಲದಿಂದ ಯಶಸ್ಸು ಸಾಧ್ಯ- ಶೀಕೃಷ್ಣ ಕೆ

ಉಜಿರೆ: ಯಾವುದೇ ಕೆಲಸವನ್ನು ಪೂರ್ಣಗೊಳಿಸುವ ಮೊದಲು ಶ್ರದ್ಧೆಯಿರಬೇಕು. ಆ ಕೆಲಸ ಸಾಧ್ಯವಾಗುವುದಿಲ್ಲ ಎಂದು ಹಿಂದೆ ಸರಿಯಬಾರದು ಎಂದು ಶ್ರೀ.ಧ.ಮಂ ಕಾಲೇಜಿನ ಹಳೆಯ ವಿದ್ಯಾರ್ಥಿ, ಉಪ್ಪಿನಂಗಡಿಯ ಚಾರ್ಟೆಡ್‌ ಅಕೌಂಟೆಟ್  ಶೀಕೃಷ್ಣ ಕೆ ಹೇಳಿದರು.

ಶ್ರೀ.ಧ.ಮಂ ಕಾಲೇಜು ಉಜಿರೆಯ ಡಿ.ಎಡ್ ಸಭಾಂಗಣದಲ್ಲಿ ವಾಣಿಜ್ಯ ವಿಭಾಗವು ಆಯೋಜಿಸಿದ 5ನೇ ಎಸ್.ಡಿ.ಎಂ ನೆನಪಿನಂಗಳ ಹಿರಿಯ ವಿದ್ಯಾರ್ಥಿಯೊಂದಿಗಿನ ಸಂವಾದ ಕಾರ್ಯಕ್ರಮದ ಸರಣಿಯಲ್ಲಿ ಮಾತನಾಡಿದರು.

ಓದಿಗೆ ಹೆಚ್ಚಿನ ಗಮನವನ್ನು ಮೀಸಲಿಡಬೇಕು. ಕನ್ನಡ ಓದಿ ಚಾರ್ಟೆಡ್‌ ಅಕೌಂಟ್ ಮಾಡಿದವರು ಕೂಡಾ ಇದ್ದು, ಸದಾ ಅವರೇ ನಮಗೆ ಪ್ರೇರಣೆಯಾಗಿ ಹೊರ ಹೊಮ್ಮಿದ್ದಾರೆ. ವಿದ್ಯಾರ್ಥಿಗಳಿಗೆ ಬರವಣಿಗೆಯ ಜೊತೆ ಓದು ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ ಬಹಳ ಮುಖ್ಯವಾಗಿರಬೇಕು. ಭವಿಷ್ಯದಲ್ಲಿ ಏನಾಗಬೇಕು ಎಂಬುದರ ಬಗ್ಗೆ ಗುರಿ ಮತ್ತು ಅರಿವಿದ್ದಾಗ ಯಶಸ್ಸು ಸಾಧ್ಯ ಎಂದು ನುಡಿದರು.

ಉಜಿರೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಲವಾರು ವಿದಾರ್ಥಿಗಳು ಇಂದು ವಿದೇಶದಲ್ಲಿಉನ್ನತ ಹುದ್ದೆಯಲ್ಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡಾ ಔದ್ಯೋಗಿಕವಾಗಿ ಹೆಚ್ಚಿನ ಮಟ್ಟದಲ್ಲಿ ಬೆಳೆಯುವಂತಾಗಬೇಕು. ಆದರೆ ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಬಂದ ಹಾದಿಯನ್ನು ಮರೆಯಬಾರದು. ಅನುಭವವು ಸವಿಯಲ್ಲ, ಅದರ ನೆನಪುಗಳು ಸವಿ ಎಂದು ಅಧ್ಯಕ್ಷ ಸ್ಥಾನ ವಹಿಸಿದ್ದ ಶ್ರೀ.ಧ.ಮಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ್ ಹೆಗ್ಡೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಎಸ್.ಡಿ.ಎಂ ನೆನಪಿನಂಗಳ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ನಿಶ್ಚಿತಾ ಎ.ಪಿ ಅವರಿಗೆ ಎಸ್.ಡಿ.ಎಂ ನೆನಪಿನಂಗಳದ ಸಂಪನ್ಮೂಲ ವ್ಯಕ್ತಿ ಶೀಕೃಷ್ಣ ಕೆ 5000 ರೂಪಾಯಿಗಳ ಸಹಾಯಧನ ನೀಡಿದರು.

ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗುರುನಾಥ ಪ್ರಭು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಶ್ರೀನಾಥ್ ಎಂ.ಪಿ. ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕರು ಶ್ರೇಯಸ್‌ ಜೈನ್, ಸುಮನ್‌ ಜೈನ್ ಮತ್ತು ಅಂತಿಮ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ.ಶ್ರೀನಾಥ್ ಎಂ.ಪಿ. ಸ್ವಾಗತಿಸಿದರು. ಅಂತಿಮ ವಿಭಾಗದ ವಿದ್ಯಾರ್ಥಿನಿ ಶ್ರಾವ್ಯ ನಿರೂಪಿಸಿ, ವಂದಿಸಿದರು.

ವರದಿ: ಹೇಮಾವತಿ, ಚೆಲುವಮ್ಮ

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago