News Karnataka Kannada
Monday, April 29 2024
ಕ್ಯಾಂಪಸ್

ಉಜಿರೆ: ಶಿಕ್ಷಣವನ್ನೇ ಉಸಿರಾಗಿಸಿ, ಗುಣಮಟ್ಟದ ಶಿಕ್ಷಣಕ್ಕೆ ಒತ್ತುಕೊಟ್ಟ ವಜ್ರಕುಮಾರ್

Vajrakumar, who made education his breath and laid emphasis on quality education
Photo Credit : By Author

ಉಜಿರೆ: ಧಾರವಾಡವನ್ನು ಕಾರ್ಯಕ್ಷೇತ್ರವನ್ನಾಗಿಸಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುತ್ತ, ಉತ್ತರ ಕರ್ನಾಟಕ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ನಡುವೆ ಕೊಂಡಿಯಾಗಿ, ಜನಾನುರಾಗಿಯಾಗಿ ಬಾಳಿದವರು ಡಾ. ನ. ವಜ್ರಕುಮಾರ್ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ. ಜಯ ಕುಮಾರ ಶೆಟ್ಟಿ ಹೇಳಿದರು.

ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ, ಇತ್ತೀಚೆಗೆ ನಿಧನರಾದ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಾ. ನ. ವಜ್ರಕುಮಾರ್ ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣವನ್ನೇ ಉಸಿರಾಗಿಸಿ, ಗುಣಮಟ್ಟದ ಶಿಕ್ಷಣಕ್ಕೆ ಒತ್ತುಕೊಟ್ಟ ವಜ್ರಕುಮಾರ್ ಅವರು ತಮ್ಮ ದೂರದರ್ಶಿತ್ವ, ಕ್ರಿಯಾಶೀಲತೆ, ಕಾರ್ಯದಕ್ಷತೆ ಹಾಗೂ ಅಜಾತಶತ್ರು ಗುಣದಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದರು ಎಂದು ಅವರು ಅಭಿಪ್ರಾಯಪಟ್ಟರು.

ವೀರೇಂದ್ರ ಹೆಗ್ಗಡೆ ಅವರ ಆಪ್ತರು ಹಾಗೂ ಉಡುಪಿಯ ಸುರಾಲು ಮೂಲದವರಾದ ಅವರು, ಧರ್ಮಸ್ಥಳ ಕ್ಷೇತ್ರವು ನೀಡಿದ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಲ್ಲದೆ, ಎಂಜಿನಿಯರಿಂಗ್, ಡೆಂಟಲ್, ವೈದ್ಯಕೀಯ ಸಂಸ್ಥೆಗಳನ್ನೂ ಸ್ಥಾಪಿಸಿದರು. ಧಾರವಾಡದಲ್ಲಿ ಎಸ್.ಡಿ.ಎಂ. ಶಿಕ್ಷಣ ವ್ಯಾಪ್ತಿಯನ್ನೂ ವಿಸ್ತರಿಸಿದರು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಎನ್. ಉದಯಚಂದ್ರ ಹಾಗೂ ಪ್ರಾಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು