News Karnataka Kannada
Monday, April 29 2024
ಕ್ಯಾಂಪಸ್

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಕಾರ್ಯಾಗಾರ

Workshop at SDM Post Graduate Centre
Photo Credit : News Kannada

ಉಜಿರೆ: ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ಮಕ್ಕಳ ಹಕ್ಕುಗಳ ಕುರಿತ ಅರಿವು ವ್ಯಾಪಕವಾಗಬೇಕು ಎಂದು ಟೋಕಿಯೊದ ಪ್ರೆಸ್ ಆಲ್ಟರ್ನೇಟಿವ್ ಪತ್ರಿಕೆಯ ಸಲಹೆಗಾರ್ತಿ ಮನೋರಮ ಭಟ್ ಜಿ.ವಿ ಅಭಿಪ್ರಾಯಪಟ್ಟರು.

ಎಸ್ .ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಮಕ್ಕಳ ಹಕ್ಕುಗಳ ಕಾರ್ಯಗಾರವನ್ನು  ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಮಕ್ಕಳು ಸಬಲರಾಗಬೇಕಾದರೆ ಅವರ ಕುಟುಂಬ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಎಲ್ಲ ಮಕ್ಕಳ ಮನೆ ಪರಿಸ್ಥಿತಿಗಳು ಒಂದೇ ರೀತಿ ಇರುವುದಿಲ್ಲ. ಕೆಲವರು ಬಡಕುಟುಂಬದವರಿದ್ದರೆ, ಕೆಲವರು ಸುಶಿಕ್ಷಿತ ಕುಟುಂಬದಲ್ಲಿರುತ್ತಾರೆ ಇನ್ನೂ ಕೆಲವರು ಏಕಮಾತೃ ಪೋಷಕರೊಂದಿಗೆ ಬೆಳೆಯುತ್ತಾರೆ. ಇಂತಹ ಮಕ್ಕಳ ಅಗತ್ಯಕ್ಕನುಗುಣವಾಗುವಂತೆ ಕಾಳಜಿ ವಹಿಸಬೇಕು ಎಂದು ಹೇಳಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ
ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ಮಾತನಾಡಿದರು.

ಕಾರ್ಯಗಾರದ ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಂಗಳೂರು ಮಕ್ಕಳ ಹಕ್ಕುಗಳ ಟ್ರಸ್ಟ್ ನ ತರಬೇತಿ ತಜ್ಞೆ ನಾಗಮಣಿ ಸಿ. ಎನ್ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್ .ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ್ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕಿ ಡಾ. ಅಕ್ಷತ .ಕೆ ಸ್ವಾಗತಿಸಿ, ವಿದ್ಯಾರ್ಥಿನಿ ಮೇಧ ನಿರೂಪಿಸಿ, ಅಮ್ಮು. ಎಸ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು