ವೇಣೂರು ಎಸ್‌ಡಿಎಂ ಐಟಿಐ: ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆ

ವೇಣೂರು: ಇಲ್ಲಿಯ ಶ್ರೀ ಧ.ಮಂ. ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಸಹಭಾಗಿತ್ವದಲ್ಲಿ ರಕ್ತದಾನದ ಬೃಹತ್ ಶಿಬಿರ ಜರಗಿತು.
ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಯಂ. ಶಿಬಿರವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಎಸ್‌ಡಿಎಂ ಐಟಿಐನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಕೆ.ಆರ್. ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಡಾ| ಪ್ರಿಯಾ ವದಾ, ಶಿಬಿರದ ಸಂಯೋಜಕ ಎನ್.ಜೆ. ನಾಗೇಶ್, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷ ಜನಾರ್ದನ ಪೂಜಾರಿ, ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ಫಲ್ಗುಣಿ ಸೇವಾ ಸಂಘದ ಅಧ್ಯಕ್ಷ ವಿ.ಯಸ್. ಜಯರಾಜ್, ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಭರತ್‌ಪ್ರಸಾದ್ ಬಿ., ಕುಂಡದಬೆಟ್ಟು ಮಂಜುಶ್ರೀ ಭಜನ ಮಂಡಳಿ ಅಧ್ಯಕ್ಷ ಜಗನ್ನಾಥ ದೇವಾಡಿಗ, ಎಸ್‌ಕೆಡಿಆರ್‌ಡಿಪಿ ಸೇವಾಪ್ರತಿನಿಧಿ ಸುರೇಶ್ ಶೆಟ್ಟಿ, ಎಸ್‌ಡಿಎಂ ಐಟಿಐ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿನರಾಜ್ ಜೈನ್, ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ, ಕುಕ್ಕೇಡಿ ಹಾಲು ಉ.ಸ. ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ದ.ಕ. ಫೊಟೋಗ್ರಾಫರ್ ಅಸೋಸಿಯೇಶನ್‌ನ ಅಧ್ಯಕ್ಷ ಅಶೋಕ್ ಆಚಾರ್ಯ, ಮಂಗಳತೇರು ಶ್ರೀದೇವಿ ಮಹಮ್ಮಾಯಿ ಮಾರಿಗುಡಿ ಸೇವಾಟ್ರಸ್ಟ್ ಅಧ್ಯಕ್ಷ ಪದ್ಮನಾಭ ಗೌಡ, ಹಳೆ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಶ್ರೀಕಾಂತ್ ಉಡುಪ, ಉಜಿರೆ ಮಹಿಳಾ ಐಟಿಐನ ಪ್ರಾಚಾರ್ಯ ಪ್ರಕಾಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

ಎಸ್‌ಡಿಎಂ ಐಟಿಐನ ಕಾರ್ಯಕ್ರಮ ಅಧಿಕಾರಿ ಪದ್ಮಪ್ರಸಾದ್ ಬಸ್ತಿ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಾಣಿಕ್ಯರಾಜ್ ಜೈನ್ ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಸತೀಶ್ ನಿರೂಪಿಸಿದರು.
ಸಹಕರಿಸಿದ ಸಂಘ-ಸಂಸ್ಥೆಗಳು

ಶ್ರೀ ಧ.ಮಂ.ಕೈ.ತ. ಸಂಸ್ಥೆಯ ಎನ್ನೆಸ್ಸೆಸ್ ಘಟಕ, ಹಳೆ ವಿದ್ಯಾರ್ಥಿ ಸಂಘ, ಗ್ರಾ.ಪಂ. ಕುಕ್ಕೇಡಿ, ಪದ್ಮಾಂಬ ಸಮೂಹ ಸಂಸ್ಥೆ ವೇಣೂರು, ಹಾಲು ಉ.ಸ. ಸಂಘ ಕುಕ್ಕೇಡಿ, ಪ್ರಾ.ಕೃ.ಪ.ಸಂಘ. ವೇಣೂರು, ಲಯನ್ಸ್ ಕ್ಲಬ್ ವೇಣೂರು, ಲಯನ್ಸ್ ಕ್ಲಬ್ ಹೈಲಾಂಡ್ ಮಂಗಳೂರು, ಫಲ್ಗುಣಿ ಸೇವಾ ಸಂಘ, ಸೌತ್ ಕೆನರಾ ಫೊಟೊಗ್ರಾಫರ್ ಅಸೋಸಿಯೇಶನ್, ಮಂಜುಶ್ರೀ ಭಜನ ಮಂಡಳಿ, ಮಾರಿಗುಡಿ ಮಂಗಳತೇರು ಸೇವಾ ಟ್ರಸ್ಟ್, ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕುಕ್ಕೇಡಿ-ನಿಟ್ಟಡೆ ಇವುಗಳ ಸಹಕಾರದೊಂದಿಗೆ ೧೨೯ ಯುನಿಟ್ ರಕ್ತ ಸಂಗ್ರಹವಾಯಿತು.

Gayathri SG

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

11 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

22 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

32 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

43 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

1 hour ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago