News Karnataka Kannada
Friday, May 10 2024
ಕ್ಯಾಂಪಸ್

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋಟಿಕಂಠ ಗೀತ ಗಾಯನ ಕಾರ್ಯಕ್ರಮ

Vitla: Kotikanta Geetha Singing Programme at Mani Balavikasa English Medium School
Photo Credit : By Author

ವಿಟ್ಲ, ಅ.28: 2022 ನೇ ಸಾಲಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದಾದ್ಯಂತ ಆಯೋಜಿಸಿದ ಕೋಟಿಕಂಠ ಗಾಯನ ಕಾರ್ಯಕ್ರಮವು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಕಾರಗೊಳಿಸಲ್ಪಟ್ಟಿತು.

ಅಕ್ಟೋಬರ್ 28ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ನಮ್ಮ ನಾಡು ನುಡಿಯ ಬಗ್ಗೆ ಅಭಿಮಾನವನ್ನು ಮೂಡಿಸುವ ಕನ್ನಡ ನಾಡಿನ ಹೆಮ್ಮೆಯ ಕವಿಗಳು ರಚಿಸಿದ “ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ,ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ ,ವಿಶ್ವವಿನೂತನ ವಿದ್ಯಾ ಚೇತನ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ಆರು ಗೀತೆಗಳನ್ನು ಶಿಸ್ತು ಬದ್ಧವಾಗಿ ಹಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಅಧಿಕಾರಿ ರವೀಂದ್ರ ಡಿ ಹಾಗೂ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಪೋಷಕರು ಹಾಗೂ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಂಕಲ್ಪ ವಿಧಿಯನ್ನು ವಿದ್ಯಾರ್ಥಿನಿ ತೃಪ್ತಿ ಬೋಧಿಸಿದರು. ಸನಿಹ ವಂದನಾರ್ಪಣೆ ನೆರವೇರಿಸಿದರು. ಶಾಲಾ ಶಿಕ್ಷಕಿ ಯಜ್ಞೇಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು