ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಪರಿಸರ ದಿನವನ್ನು ಸೋಮವಾರ ಆಚರಿಸಲಾಯಿತು.

ಪರಿಸರದ ಮಹತ್ವ ಕುರಿತು ಮಾತನಾಡಿದ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ಬಾಲಕೃಷ್ಣ ಅವರು, “ಪರಿಸರದೊಂದಿಗೆ ಪ್ರತಿಯೊಂದು ಜೀವಿಗೂ ಭಾವನಾತ್ಮಕ ಸಂಬಂಧವಿದೆ, ಪೂರ್ವಜರು ಪರಿಸರವನ್ನು ಪ್ರೀತಿಸುವುದರ ಜೊತೆಗೆ ಈ ಬಗ್ಗೆ ಪೂಜನೀಯ ಭಾವನೆಯನ್ನು ಹೊಂದಿದ್ದರು. ಈ ರೀತಿಯಾಗಿ ಪರಿಸರ ಉಳಿಸುತ್ತಿದ್ದರು. ಆದರೆ ನಾವಿಂದು ಪರಿಸರದ ಮಹತ್ವವನ್ನು ಮರೆಯುತ್ತಿದ್ದೇವೆ, ಮಳೆಗಾಲದೊಂದಿಗೆ ಆಚರಿಸಬೇಕಾಗಿದ್ದ ಈ ವಿಶ್ವ ಪರಿಸರ ದಿನವನ್ನು ನಾವು ಇಂದು ಮಳೆಯ ಕೊರತೆ, ನೀರಿನ ಅಭಾವ, ಬಿಸಿಯಾದ ವಾತಾವರಣ, ಅತಿಯಾದ ಬಾಯಾರಿಕೆಯಿಂದ ಆಚರಿಸುತ್ತಿರುವುದು ವಿಪರ‍್ಯಾಸವೆಂದೆನಿಸುತ್ತಿದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು, ಅಧ್ಯಾಪಕರಾದ ಅನ್ನಪೂರ್ಣ ಎನ್ ಭಟ್ ಹಾಗೂ ರೂಪಕಲಾ ಎಂ ಉಪಸ್ಥಿತರಿದ್ದರು.

೭ನೇ ತರಗತಿಯ ವಿದ್ಯಾರ್ಥಿ ಆದಿತ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Gayathri SG

Recent Posts

ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ : ವಿಡಿಯೋ ವೈರಲ್‌

ಕಜಕೀಸ್ತಾನದ  ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ.

14 mins ago

ಸಿಲಿಂಡರ್‌ ಬ್ಲಾಸ್ಟ್‌ನಿಂದ ಮನೆಯಲ್ಲಿ ಬೆಂಕಿ : 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ…

20 mins ago

ಬೀದರ್‌ನ ’14 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

'ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ನಡೆಯಲಿದೆ' ಎಂದು ನೀಟ್‌ ಸಂಯೋಜಕ…

44 mins ago

ಮೋದಿ ಬಂದರೂ ಮಾದಿಗರು ಬಿಜೆಪಿ ಬೆಂಬಲಿಸಲ್ಲ: ಚಂದ್ರಕಾಂತ ಹಿಪ್ಪಳಗಾಂವ

ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಪರಿಶಿಷ್ಟ…

50 mins ago

ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ

ಬೀಸಿದ ಗಾಳಿಗೆ ಸುರಿದ ಮಳೆಯ ರಭಸಕ್ಕೆ ಏಸು ಕ್ರೈಸ್ತನ ಮೂರ್ತಿ ಧರೆಗುರುಳಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿ…

57 mins ago

ಶರೀರದ ದಾಹ, ಬಾಯಾರಿಕೆ ನಿವಾರಣೆಗಾಗಿ ಚಿಂಚಾ ಪಾನಕ ಬಳಸಿ: ಡಾ.ಶುಭ ರಾಜೇಶ್

ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ…

1 hour ago