ವಿಶ್ವ ಪರಿಸರ ದಿನಾಚರಣೆ: ಸಸಿ ವಿತರಣೆ, ಪರಿಸರಗೀತೆ ಗಾಯನ, ವಿದ್ಯಾರ್ಥಿ ಉಪನ್ಯಾಸ

ಉಜಿರೆ: ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವಂತಹ ಪ್ರಜ್ಞಾಪೂರ್ವಕ ಪ್ರಯತ್ನವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ. ಕರೆ ನೀಡಿದರು.

ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಜೂ.5ರಂದು ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ಎಂಬುದು ನಿತ್ಯ ಬಳಕೆಯ ಮೂಲಭೂತ ವಸ್ತುವಾಗಿ ಮಾರ್ಪಟ್ಟಿದ್ದು, ಇದರ ಮೇಲಿನ ಅತಿಯಾದ ಅವಲಂಬನೆ ಪರಿಸರವನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿದೆ. ಹೀಗಾಗಿ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ಮಿತಗೊಳಿಸುವ ಮೂಲಕ ವಿದ್ಯಾರ್ಥಿಗಳು ಜವಾಬ್ದಾರಿ ಮೆರೆಯಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ, ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಅಧ್ಯಾಪಕ ದೀಕ್ಷಿತ್ ರೈ ಅವರು ಪ್ರಕೃತಿಯಲ್ಲಿ ಉಂಟಾಗುವ ವಿಕೋಪಗಳ ಕುರಿತು ಮಾತನಾಡಿ, ಉದಾಹರಣೆಗಳ ಮೂಲಕ ವಾಸ್ತವ ಜಗತ್ತು ಹಾಗೂ ಪರಿಸರದ ಪರಿಚಯ ನೀಡಿದರು.

“ನಮ್ಮ ವಿನಾಶಕ್ಕೆ ನಾವೇ ನಾಂದಿ ಹಾಡುತ್ತಿದ್ದು, ಶೂನ್ಯದ ಕಡೆಗೆ ಹೋಗುವುದನ್ನು ಬಿಟ್ಟು ಪೂರ್ಣತೆಯ ಕಡೆಗೆ ಚಲಿಸೋಣ ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಮರುಬಳಕೆ ಮಾಡೋಣ” ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬಳಿಕ, ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ವಿದ್ಯಾರ್ಥಿಗಳು ರಚಿಸಿದ ಇ-ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿ, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು. ವಿದ್ಯಾರ್ಥಿಗಳು ಸರಣಿ ಪರಿಸರಗೀತೆಗಳನ್ನು ಹಾಡಿದರು.

ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಸಾಧನಾ‌ ಹೆಗ್ಡೆ, ವರ್ಷ ಹಾಗೂ ನಯನ ವಿದ್ಯಾರ್ಥಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಶಕುಂತಲಾ, ಅಭಿಲಾಷ್ ಕೆ.ಎಸ್., ಸ್ವಾತಿ, ಮಂಜುಶ್ರೀ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಜನಾ ಎಸ್. ಸ್ವಾಗತಿಸಿ, ಸುಪ್ರೀತ್ ಬಿ. ವಂದಿಸಿದರು. ವೀಕ್ಷಿತಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Sneha Gowda

Recent Posts

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

9 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

34 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

49 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

1 hour ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

2 hours ago