ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

ಉಜಿರೆ: ವೃತ್ತಿಪರ ಒತ್ತಡ ಮತ್ತು ದೈನಂದಿನ ಸಮಸ್ಯೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂನ ಮನಶಾಸ್ತ್ರಜ್ಞೆ ಪೂಜಾ ಡಿ.ಜಿ ಅಭಿಪ್ರಾಯಪಟ್ಟರು.

ಉಜಿರೆ ಎಸ್ ಡಿ ಎಂ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಮನಶಾಸ್ತ್ರ ವಿಭಾಗವು ‘ವಿಶ್ವ ಸ್ಕಿಜೋಫ್ರೇನಿಯಾ
ದಿನ’ದ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸಮಾಜದಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚಿನ ಮಾನಸಿಕ ಖಿನ್ನತೆಗೆ ಒಳಗಾಗುವುದಕ್ಕೆ ಕಾರಣಗಳು ಏನೆಂಬುದರತ್ತ ಗಮನ ಹರಿಸಬೇಕಾಗಿದೆ. ದೈನಂದಿನ ಬದುಕಿನಲ್ಲಿ ಮಹತ್ತರ ಬದಲಾವಣೆಗಳನ್ನು ತಂದುಕೊಳ್ಳುವುದರ ಮೂಲಕ ಮಾನಸಿಕ ಖಿನ್ನತೆಯ ಅಪಾಯಗಳಿಂದ ಪಾರಾಗಬಹುದು.

ಉತ್ತಮ ಹವ್ಯಾಸಗಳ ಕಡೆಗೆ ಹೆಚ್ಚಿನ ಗಮನ ಕೇಂದ್ರೀಕರಿಸುವಿಕೆ, ದೈನಂದಿನ  ವ್ಯಾಯಾಮಕ್ಕೆ  ಆದ್ಯತೆ ನೀಡುವಿಕೆ ಸೇರಿದಂತೆ ಬದುಕಿನ ಶೈಲಿಯನ್ನು ಬದಲಾಯಿಸಿಕೊಂಡು ಖಿನ್ನತೆಯಿಂದ ದೂರ ಉಳಿಯಬಹುದು ಎಂದು ಹೇಳಿದರು.

ಮಾನಸಿಕ ಖಿನ್ನತೆಯಿಂದಾಗಿ ಮಹಿಳೆಯರು ಆತ್ಮಹತ್ಯೆ ಒಳಗಾಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಒಟ್ಟು ಸಾವಿನ ಪ್ರಮಾಣದಲ್ಲಿ ಶೇ. ೨೦ರಷ್ಟು ಜನರು ಆತ್ಮಹತ್ಯೆಯಿಂದಾಗಿ ಸಾವನ್ನಪ್ಪುತ್ತಿದ್ದಾರೆ. ಆತಂಕ, ಕೆಲಸದ ಒತ್ತಡ, ಅಶಾಂತಿ ಇತ್ಯಾದಿ ಕಾರಣಗಳಿಂದಾಗಿ ಆತ್ಮಹತ್ಯೆ ಸಂಖ್ಯೆ ಏರಿಕೆಯಗುತ್ತಿದೆ. ಮಾನಸಿಕ ಖಿನ್ನತೆ ತೊಡೆದು ಹಾಕಲು ಮನೋಶಾಸ್ತ್ರಜ್ಞರನ್ನು ಭೇಟಿಯಾಗುವುದು ಅಗತ್ಯ. ಅವರಿಂದ ದೊರೆಯುವಂತಹ ಸಲಹೆಗಳನ್ನು ಸರಿಯಾಗಿ ಪರಿಪಾಲಿಸಿದಲ್ಲಿ ಈ ದುರ್ಘಟನೆಗಳನ್ನು ಕಡಿಮೆ ಮಾಡಬಹುದು ಎಂದರು.

ಭಯ, ಅನಿರೀಕ್ಷಿತ ಸ್ವಭಾವಗಳ ಮನೋಪ್ರವೃತ್ತಿ ಮತ್ತು ಆಕ್ರಾಮಕ ವರ್ತನೆಗಳ ಗುಣಲಕ್ಷಣಗಳನ್ನು ಕಳಚಿಕೊಳ್ಳಬೇಕು. ಸ್ವಭಾವಗಳ ಒಳಗೇ ಇರುವ ಮಿತಿಗಳನ್ನು ಕಂಡುಕೊಂಡು ಬದಲಾಗುವ ಮನಸ್ಥಿತಿಯನ್ನು ರೂಪಿಸಿಕೊಳ್ಳಬೇಕು. ಈ ಮೂಲಕ ಸ್ಕಿಜೋಫ್ರೇನಿಯಾದಂಥ ಮಾನಸಿಕ ತೊಳಲಾಟದ ಪರಿಸ್ಥಿತಿಯನ್ನು ಎದುರಿಸುವ ಅಪಾಯದಿಂದ ತಪ್ಪಿಸಿಕೊಳ್ಳಬಹುದು.

ಅಗತ್ಯವೆನ್ನಿಸಿದರೆ ಮನಃಶಾಸ್ತ್ರಜ್ಞರೊಂದಿಗೆ ಸಮಾಲೋಚಿಸಿ ವ್ಯಕ್ತಿತ್ವವನ್ನು ಮರುರೂಪಿಸಿಕೊಳ್ಳಬೇಕು ಎಂದು ನುಡಿದರು.

ಮನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್, ಕಾರ್ಯಕ್ರಮದ ಆಯೋಜಕರಾದ ಸಿಂಧು ವಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಛಾಯಾ ಸ್ವಾಗತಿಸಿದರು. ಅನುಶೀ ನಿರೂಪಿಸಿದರು. ಅನುಷಾ ಜಿ ಶೆಟ್ಟಿ ವಂದಿಸಿದರು.

Sneha Gowda

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

7 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

8 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

8 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

8 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

9 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

9 hours ago