Showing 20 of 402 posts • Page 1 of 21
ಅಚಾನಕ್ಕಾಗಿ ತನ್ನೆದುರಿಗೆ ಸಿಕ್ಕ ಪ್ರಾಣಿಗಳ ಮೇಲೆ ಏಕಾಏಕಿ ದಾಳಿ ನಡೆಸುವ ಹೆಬ್ಬುಲಿ ನೀಲದಂತದ ಆನೆಯನ್ನ ನೋಡಿ ಸೈಲೆಂಟಾಗಿ ಮಲಗಿದ ದೃಶ್ಯ ಬಂಡೀಪುರದಲ್ಲಿ ಸೆರೆಯಾಗಿದೆ.
ವಿದ್ಯುತ್ ಶಾಕ್ ತಗುಲಿ ನಾಲ್ಕು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಸಂಭವಿಸಿದೆ.
ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಜೋಡಿ ಹುಲಿಗಳು ದರ್ಶನ ನೀಡಿವೆ. ತಾಯಿ ಜೊತೆಯಲ್ಲಿದ್ದ ಮರಿ ಹುಲಿಯನ್ನ ಕಂಡ ಪ್ರವಾಸಿಗರು ಸಂತಸಗೊಂಡಿದ್ದಾರೆ.
ಕಾರು ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿಯಾಗಿ ಮಗು ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ನಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿದೆ.
ರಾಜ್ಯದ ಮೇಕೆದಾಟಿನಲ್ಲಿ ಕುಡಿಯುವ ನೀರಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರವು ಕ್ರಿಯಾಯೋಜನೆ ಸಿದ್ದಪಡಿಸಿದ್ದು, ಅದನ್ನು ವಿರೋಧಿಸಿದ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ದ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಟೆಂಪೋವೊಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ, 11 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದಲ್ಲಿ ನಡೆದಿದೆ.
ಕೆಎಸ್ಸಾರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅರಣ್ಯ ಪ್ರದೇಶಕ್ಕೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಲ್ ರೋಡ್ ಸಮೀಪ ನಡೆದಿದೆ.
ತಾಲೂಕಿನ ಅಂಬಳೆ ಗ್ರಾಮದ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಹಲವೆಡೆ ಕಳ್ಳತನ ಎಸಗಿದ್ದ ನಾಲ್ವರು ಅಂತರಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹದೇಶ್ವರ ಬೆಟ್ಟದ ರಸ್ತೆಯ ಪೊನ್ನಾಚಿ ಕ್ರಾಸ್ ಬಳಿ ಅಪಘಾತ ನಡೆದಿದೆ.
ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಬಾಳೆ ಬೆಳೆ, ಸಂಪೂರ್ಣವಾಗಿ ನೆಲೆ ಕಚ್ಚಿದೆ. ಚಾಮರಾಜನಗರ ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಬಾಳೆ ಬೆಳೆ ಹಾನಿಯಾಗಿದೆ.
ಕಾರು, ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಕೇರಳ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಆಹಾರಕ್ಕಾಗಿ ಮುಳ್ಳುಹಂದಿಯನ್ನು ಬೇಟೆಯಾಡಲು ಹೋದ ಚಿರತೆಯೊಂದು ಅದರ ಮುಳ್ಳುಗಳು ಚುಚ್ಚಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಹಲವು ದಿನಗಳಿಂದ ಓಡಾಡಿ, ಸಾಕುನಾಯಿ ಸೇರಿದಂತೆ ಇತರೆ ಪ್ರಾಣಿಗಳ ಮೇಲೆ ದಾಳಿ ಮಾಡಿ ರೈತರಲ್ಲಿ ಭಯ ಮೂಡಿಸಿದ್ದ ಚಾಲಾಕಿ ಚಿರತೆ ಸೆರೆಯಾದ ಘಟನೆ ಗುಂಡ್ಲುಪೇಟೆ ಪಟ್ಟಣ ಹೊರವಲಯದ ಮನಗಳ್ಳಿಯಲ್ಲಿ ನಡೆದಿದೆ.
ಹಾಡಹಗಲೇ ಹುಲಿ ದಾಳಿಗೆ ಹಸು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.
ಮಲೆ ಮಹದೇಶ್ವರ ಪಾದಯಾತ್ರಿಗಳ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಪೊನ್ನಾಚ್ಚಿ ಕ್ರಾಸ್ ಬಳಿ ನಡೆದಿದೆ.
ಚಾಮರಾಜನಗರದಿಂದ ತೆರಕಣಾಂಬಿ ಮಾರ್ಗವಾಗಿ ಗುಂಡ್ಲುಪೇಟೆಗೆ ಬರ್ತಿದ್ದ ಕೆ ಎಸ್ ಆರ್ಟಿಸಿ ಬಸ್ಸಿನ ಆಕ್ಸೆಲ್ ಕಟ್ಟಾಗಿದ್ದು ಚಾಲಕನ ಜಾಗರೂಕತೆಯಿಂದ ಬಾರಿ ಅನಾಹುತವೊಂದು ತಪ್ಪಿದೆ.
ಪ್ರತಿಷ್ಠಿತ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಅನಧಿಕೃತವಾಗಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿರುವ ಖಾಸಗಿ ರೆಸಾರ್ಟ್ ಕಂಟ್ರಿ ಕ್ಲಬ್ನಿಂದ ನಿಯಮ ಉಲ್ಲಂಘನೆ ಮಾಡಲಾಗಿದ್ದು ರಾಜಾರೋಷವಾಗಿ ಕಾಮಗಾರಿ ನಡೆಸಲಾಗುತ್ತಿದೆ.
ಹಸಮಣೆ ಏರಬೇಕಿದ್ದ ವರನಿಗೆ ದುಷ್ಕರ್ಮಿಗಳು ಚಾಕು ಇರಿದ ಹಿನ್ನೆಲೆ ನಿಶ್ಚಯವಾಗಿದ್ದ ಮದುವೆ ನಿಂತು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
ಆಹಾರವನ್ನರಸಿ ಕಾಡಿನಿಂದ ನಾಡಿಗೆ ಬಂದು ಮನೆಯೊಳಗೆ ನುಗ್ಗಿದ್ದ ಕಡವೆಯನ್ನ ರಕ್ಷಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಕಾಡಿಗೆ ಸ್ಥಳಾಂತರಿಸಿದ ಘಟನೆ ಮಂಗಳವಾರ ನಡೆದಿದೆ.