ಗುಂಡ್ಲುಪೇಟೆ : ಹಂಗಳ ಹೋಬಳಿ, ಮೇಲ್ಮಾಮನಹಳ್ಳಿ, ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿಗಳು ಇವರ ಪತ್ರದಲ್ಲಿ ಪುಸಿದ್ದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನ ಗೇಟಿಗೆ ಹೊಂದಿಕೊಂಡಂತೆ ಸರಿ ಸುಮಾರು 300 ಮೀಟರ್ ಅಂತರದವರೆಗೆ ರಸ್ತೆಯ ಬದಿಯಲ್ಲಿ ಸೀಟ್ಸ್ ನಿಂದ ನಿರ್ಮಿಸಿರುವ ಅಂಗಡಿ ಮಳಿಗೆಗಳಿದ್ದು ಸದರಿ ಅಂಗಡಿ ಮಳಿಗೆಗಳನ್ನು ತೆರೆಯಲು ಸಂಬಂಧಪಟ್ಟ ಯಾವುದೇ ಇಲಾಖೆಯಿಂದ ಅನುಮತಿ ಪಡೆದಿರುವುದಿಲ್ಲ.

ಹೀಗೆ ಸೂಕ್ಷ್ಮ ಪರಿಸರ ವಲಯಕ್ಕೆ ಸೇರಿದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ರಸ್ತೆಯ ಇಕ್ಕೆಲಗಳಲ್ಲಿ ಈ ರೀತಿ ಅಂಗಡಿ ಮಳಿಗೆಗಳನ್ನು ಅನಧಿಕೃತವಾಗಿ ತೆರೆದು ಪ್ಲಾಸ್ಟಿಕ್ ಬಾಟಲ್ ಗಳು ಹಾಗೂ ಇತರೆ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಮಾರಾಟ ಮಾಡಿ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಬಿಸಾಡಿ ಪರಿಸರಕ್ಕೆ ಹಾನಿ ಉಂಟು ಮಾಡುತ್ತಿದ್ದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ಪರಿಸರ ವಲಯದಲ್ಲಿ ಅನಧಿಕೃತವಾಗಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವುದು, ಅಂಗಡಿಗಳನ್ನು ತೆರೆಯುವುದು ಕಾನೂನು ಬಾಹಿರವಾಗಿರುತ್ತದೆ.
ಮುಂದುವರೆದು ಅನಧಿಕೃತವಾಗಿ ಗಣ್ಯ ವ್ಯಕ್ತಿಗಳ ಛಾಯಾಚಿತ್ರಗಳನ್ನು ಹಾಕಿ ಸ್ಥಳವನ್ನು ಗುರುತಿಸಿ ರಸ್ತೆಯಲ್ಲಿ ವಾಹನಗಳು ಚಲಿಸಲು ಸಹ ತೊಂದರೆ ಮಾಡುತ್ತಿದ್ದು, ಇವುಗಳನ್ನು ಸಹ ತೆರವುಗೊಳಿಸುವುದು ಅತ್ಯವಶ್ಯಕವಾಗಿರುತ್ತದೆ.

ಈ ಕುರಿತು ಸೂಕ್ಶ್ಮ ಪ್ರದೇಶದಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಅಂಗಡಿ ಮಳಿಗೆಗಳನ್ನು ರಸ್ತೆಯ ಮಧ್ಯದಲ್ಲಿ ಹಾಕಿರುವ ಗಣ್ಯ ವ್ಯಕ್ತಿಗಳ ಛಾಯಾಚಿತ್ರಗಳನ್ನು ತೆರವುಗೊಳಿಸಿಕೊಡಬೇಕೆಂದು ಸೆ.12, 2024 ರಂದು ಕೋರಿರುವ ಮೇರೆಗೆ ವಲಯ ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟ, ಮೇಲ್ಮಾಮನಹಳ್ಳಿ, ಗುಂಡ್ಲುಪೇಟೆ ತಾಲ್ಲೂಕು ರವರನ್ನು ಅರ್ಜಿದಾರರನ್ನಾಗಿ ಮಾಡಿ ಅನಧಿಕೃತವಾಗಿ ಸರ್ಕಾರಿ ಜಮೀನಲ್ಲಿ ಅಂಗಡಿ ಮಳಿಗೆಗಳನ್ನು ನಿರ್ಮಿಸಿರುವುದರಿಂದ ಅವುಗಳನ್ನ ತೆರವುಗೊಳಿಸಿಕೊಡುವಂತೆ ದೂರು ನೀಡಿದ್ದರ ಹಿನ್ನೆಲೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

