ಚಾಮರಾಜನಗರ: ರಾಜ್ಯದ ಶಿಕ್ಷಣ ಸಚಿವರಾದ ಬಳಿಕ ಮೊದಲ ಬಾರಿಗೆ ಮಧುಬಂಗಾರಪ್ಪ ಅವರು ಚಾಮರಾಜನಗರಕ್ಕೆ ಭೇಟಿ ನೀಡಿ ವಿವಿಧ ಘೋಷಣೆಗಳನ್ನು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ 18,500 ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯ ಮೂಲಕ ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಿಷ್ಠಗೊಳಿಸುವತ್ತ ಸಚಿವರು ಗಮನ ಹರಿಸಿದ್ದಾರೆ.

