ಗುಂಡ್ಲುಪೇಟೆ : ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗರಗನಹಳ್ಳಿ ಗೇಟ್ ಬಳಿ ನಡೆದಿದೆ‌.

ತಾಲೂಕಿನ ಕೂತನೂರು ಗ್ರಾಮದ ಮಂಜು ತೀವ್ರವಾಗಿ ಗಾಯಗೊಂಡ ಬೈಕ್ ಸವಾರ, ಗುಂಡ್ಲುಪೇಟೆಯಿಂದ ತೆರಳುತ್ತಿದ್ದ ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದ್ದು, ಘಟನೆಯಲ್ಲಿ ಬೈಕ್ ಸವಾರನ ಕೈಗೆ ತೀವ್ರ ಗಾಯವಾಗಿದೆ, ಹೊಟ್ಟೆ, ಎದೆ ಭಾಗಕ್ಕೂ ಪೆಟ್ಟು ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಹಿತಿ ಅರಿತ ಬೇಗೂರು ಠಾಣೆ ಪೊಲೀಸರು ಕೂಡಲೇ ಗಾಯಗಳುವನ್ನು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಬೈಕ್ ಹಾಗೂ ಟಿಪ್ಪರ್ ಲಾರಿಯನ್ನು ಬೇಗೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.