ಚಾಮರಾಜನಗರ: ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಇತ್ತೀಚಿಗೆ ಅಂಬೇಡ್ಕರ್ ಭಾವಚಿತ್ರವಿರುವ ಪ್ಲೆಕ್ಸ್ ಹಾಗೂ ಬುದ್ಧನ ವಿಗ್ರಹ ವಿರೂಪಗೊಳಿಸಿದ ಕಿಡಿಗೇಡಿಯನ್ನು ಬಂಧಿಸಲಾಗಿದೆ.
ಜ್ಯೋತಿಗೌಡನಪುರ ಗ್ರಾಮದ ನಿವಾಸಿ ಮಂಜುನಾಥ್ (31) ಬಂಧಿತ ಆರೋಪಿ. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜ್ಯೋತಿಗೌಡನಪುರ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ವಿಶೇಷ ತಂಡಗಳ ತನಿಖೆ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ವಿಧಾನಗಳಿಂದ ದೊರೆತ ಮಾಹಿತಿ ಹಾಗೂ ಖಚಿತ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್ಪಿ ಧರ್ಮೇಂದ್ರ, ಸ್ನೇಹರಾಜ್ ಹಾಜರಿದ್ದರು.

